ಶಾಂತಿನಗರ ನಿವಾಸಿಗಳಿಂದ ಪ್ರತಿಭಟನೆ
SHIMOGA : ಶಾಂತಿನಗರದಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡಬೇಕು ಎಂದು ಆಗ್ರಹಿಸಿ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿ ಎದುರು ಶಾಂತಿನಗರ ನಾಗರಿಕ ಹಕ್ಕು ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು. ಈ ಭಾಗದಲ್ಲಿ 5 – 6 ದಿನಕ್ಕೊಮ್ಮೆ ನೀರು ಬಿಡಲಾಗುತ್ತಿದೆ. ಆದರೆ ಇದು ಕೂಡ ಸಮರ್ಪಕವಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. → ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ