ಶಿವಮೊಗ್ಗ ಲೈವ್.ಕಾಂ | SHIMOGA NEWS | 4 MAY 2021
ಆಕ್ಸಿಜನ್ ಕೊರತೆಯಿಂದ ಚಾಮರಾಜನಗರದಲ್ಲಿ ಕರೋನ ಸೋಂಕಿತರು ಸಾವನ್ನಪ್ಪಿದ ಘಟನೆ ರಾಜ್ಯಾದ್ಯಂತ ತಲ್ಲಣ ಸೃಷ್ಟಿಸಿದೆ. ಶಿವಮೊಗ್ಗದಲ್ಲಿ ಆಕ್ಸಿಜನ್ ಲಭ್ಯವಿದೆಯಾ ಎಂಬ ಪ್ರಶ್ನೆ ಮೂಡಿಸಿದೆ.
ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಆಗದಂತೆ ನೋಡಿಕೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಕೆಲ ದಿನದ ಹಿಂದೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆಕ್ಸಿಜನ್ ಲಭ್ಯತೆ ಕುರಿತು ಮಾಹಿತಿ ನೀಡಿದ್ದರು. ಇದರ ವಿಡಿಯೋ ವರದಿ ಇಲ್ಲಿದೆ.
ಆಕ್ಸಿಜನ್ ಕೊರತೆ ಉಂಟಾಗಬಹುದಾ?
ಮೊದಲ ಅಲೆಯಲ್ಲಿ ಆಕ್ಸಿಜನ್ ಕೊರತೆ ಎದುರಾದಾಗ ಜಿಲ್ಲೆಯಲ್ಲಿ 19 ಕೆಎಲ್ಡಿ(ಕಿಲೋ ಪರ್ ಡೇ) ಘಟಕ ಸ್ಥಾಪಿಸಲಾಗಿದ್ದು ಜಿಲ್ಲೆಯಲ್ಲಿ ಅತಿ ಹೆಚ್ಚು ರೋಗಿಗಳು ದಾಖಲಾಗಿರುವ ಮೆಗ್ಗಾನ್ ಆಸ್ಪತ್ರೆ ಮೇಲಿನ ಒತ್ತಡವನ್ನು ಇದು ಕಡಿಮೆ ಮಾಡಿದೆ.
19 ಕೆಎಲ್ಡಿ ಸಾಮರ್ಥ್ಯದ ಘಟಕ ಹಾಗೂ 25 ಜಂಬೋ ಆಕ್ಸಿಜನ್, 25 ಮಿನಿ ಆಕ್ಸಿಜನ್ ಸಿಲಿಂಡರ್ಗಳ ದಾಸ್ತಾನು ಲಭ್ಯವಿದೆ. ಏಪ್ರಿಲ್ ತಿಂಗಳಲ್ಲಿ ಡಿ ಟೈಪ್ ಸಿಲಿಂಡರ್ ಬೇಡಿಕೆ ಹೆಚ್ಚಾಗಿದ್ದು ಮೊದಲನೇ ವಾರ 150 ಸಿಲಿಂಡರ್, 2ನೇ ವಾರ 109 ಸಿಲಿಂಡರ್, 3ನೇ ವಾರ 200 ಸಿಲಿಂಡರ್, 4ನೇ ವಾರ 232 ಸಿಲಿಂಡರ್ ಪೂರೈಸಲಾಗಿದೆ.
ಮೆಗ್ಗಾನ್ ಆಸ್ಪತ್ರೆ ಮೇಲಿನ ಒತ್ತಡ ಹೆಚ್ಚಾಗಿದ್ದು ಪ್ರಸ್ತುತ 300ಕ್ಕೂ ಹೆಚ್ಚು ಕೋವಿಡ್ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸಾಮರ್ಥ್ಯಕ್ಕೆ ಅನುಗುಣವಾಗಿ ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿದೆ. ಪ್ರತಿ ದಿನ 700 ರಿಂದ 800 ಪ್ರಕರಣಗಳು ಬೆಳಕಿಗೆ ಬರುತ್ತಿದ್ದು ಮುಂದೆ ಆಕ್ಸಿಜನ್ ಆಭಾವ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ.
ಮೂರು ದಿನಕ್ಕೊಮ್ಮೆ ಬಳ್ಳಾರಿಯಿಂದ ಒಂದು ಲಾರಿ ಆಕ್ಸಿಜನ್ ಪೂರೈಕೆಯಾಗುತ್ತಿದ್ದು ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ. ಮಾಚೇನಹಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಸ್ಥಾಪಿಸಿರುವ ಆಕ್ಸಿಜನ್ ಪ್ಲಾಂಟ್ ಒಂದು ವಾರದಲ್ಲಿ ಚಾಲನೆಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಅಲ್ಲಿಂದಲೂ ಆಕ್ಸಿಜನ್ ಸಿಗಲಿದೆ.
ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಯಲ್ಲಿರುವ ಆಕ್ಸಿಜನ್ ಪ್ಲಾಂಟ್ ಆರಂಭಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಚರ್ಚೆ ನಡೆಸಿದ್ದಾರೆ. ಪ್ರತಿ ದಿನ 200 ರಿಂದ 300 ಸಿಲಿಂಡರ್ ಭರ್ತಿ ಮಾಡಬಹುದು. ಬೇರೆ ಜಿಲ್ಲೆಗಳಿಗೂ ಇಲ್ಲಿಂದಲೇ ರವಾನೆ ಮಾಡುವಷ್ಟು ಶಕ್ತಿ ಇದೆ. ಎರಡು ವಾರದಲ್ಲಿ ಇದು ಕಾರ್ಯಾರಂಭ ಮಾಡಲಿದೆ ಎನ್ನುತ್ತಾರೆ ಅಧಿಕಾರಿಗಳು. ಪ್ರಸ್ತುತ ಮೆಗ್ಗಾನ್ನಲ್ಲಿ ಆಕ್ಸಿಜನ್ ಬೇಕಿರುವ 350 ಜನ ರೋಗಿಗಳಿದ್ದು 156 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಎರಡು ವರ್ಷದ ಮನೆ ಮಾರಾಟಕ್ಕಿದೆ. GROUND FLOOR 2BHK, 1st FLOOR 1 BHK (ಎರಡು ಮನೆಗಳು), 2nd FLOOR BACHELOR ROOM WITH ATTACHED BATHROOM. ವಿಳಾಸ : ತರಳಬಾಳು ಲೇಔಟ್ ಪಕ್ಕ, ತಾವರೆಚಟ್ನಹಳ್ಳಿ, ಪೇಸ್ ಕಾಲೇಜು ಹತ್ತಿರ. ಹೊನ್ನಾಳಿ ರಸ್ತೆ, ಶಿವಮೊಗ್ಗ. ಹೆಚ್ಚಿನ ಮಾಹಿತಿಗೆ : 9972194422 ಜಾಹೀರಾತು
ಶಿವಮೊಗ್ಗದಲ್ಲಿ ಮನೆ ಮಾರಾಟಕ್ಕಿದೆ