ಶಿವಮೊಗ್ಗ ಲೈವ್.ಕಾಂ | SHIMOGA | 30 ಸೆಪ್ಟೆಂಬರ್ 2019
https://www.facebook.com/ckdcinternational/videos/2433592173582988/?t=1
ಬೆಂಗಳೂರು ಮಾದರಿಯಲ್ಲಿ ಶಿವಮೊಗ್ಗದ ಹಳೆ ಜೈಲು ಆವರಣದಲ್ಲಿ ಫ್ರೀಡಂ ಪಾರ್ಕ್ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇವತ್ತು ಗುದ್ದಲಿ ಪೂಜೆ ಮಾಡಿದರು. ಇನ್ನು, ಫ್ರೀಡಾಂ ಪಾರ್ಕ್’ಗೆ ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ ಅವರ ಹೆಸರಿಡಬೇಕು ಎಂದು ಉಪಮೇಯರ್ ಚನ್ನಬಸಪ್ಪ ಮನವಿ ಮಾಡಿದ್ದಾರೆ. ಇದಕ್ಕೆ ಸಿಎಂ ಪೂರಕವಾಗಿ ಸ್ಪಂದಿಸಿದ್ದಾರೆ.

ಗುದ್ದಲಿ ಪೂಜೆ ಬಳಿಕ ಡಿಎಆರ್ ಮೈದಾನದಲ್ಲಿ ಆಯೋಜಿಸಲಾಗಿದ್ದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭದಲ್ಲಿ, ಫ್ರೀಡಂ ಪಾರ್ಕ್’ಗೆ ಚಂದ್ರಶೇಖರ್ ಆಜಾದ್ ಅವರ ಹೆಸರಿಡಬೇಕು ಎಂದು ಉಪಮೇಯರ್ ಮನವಿ ಮಾಡಿದರು.
ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ ಅಕ್ಟೋಬರ್ 3ರಂದು ಕ್ಯಾಬಿನೆಟ್ ಸಭೆ ನಡೆಯಲಿದೆ. ಅಲ್ಲಿ ಈ ಕುರಿತು ಚರ್ಚೆ ನಡೆಸಿ, ಅಂತಿಮವಾಗಿ ಹೆಸರು ಘೋಷಿಸಲಾಗುತ್ತದೆ ಎಂದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]