ಸರ್ಕಾರ 6ನೇ ಗ್ಯಾರಂಟಿ ಜಾರಿಗೊಳಿಸಲಿ
ಹೊಸನಗರ : ಈಡಿಗರ ಭವನದಲ್ಲಿ ರಾಜ್ಯ ಸರ್ಕಾರಿ ನೌಕರರ ತಾಲೂಕು ಸಮ್ಮೇಳನ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ರಾಜ್ಯ ಸರ್ಕಾರ 5 ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಸರ್ಕಾರಿ ನೌಕರರ ಬೇಡಿಕೆಗಳನ್ನು 6ನೇ ಗ್ಯಾರಂಟಿ ಎಂದು ಭಾವಿಸಿ ಜಾರಿಗೊಳಿಸಲಿ ಎಂದು ಮನವಿ ಮಾಡಿದರು. ಶಾಸಕರದ ಬೇಳೂರು ಗೋಪಾಲಕೃಷ್ಣ, ಆರಗ ಜ್ಞಾನೇಂದ್ರ ಸೇರಿದಂತೆ ಹಲವರು ಭಾಗಿಯಾಗಿದ್ದರು. ಸಂಘದ ಮಾಜಿ ಅಧ್ಯಕ್ಷರುಗಳನ್ನು ಸನ್ಮಾನಿಸಲಾಯಿತು.