ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ ಜಿಲ್ಲೆಯಾದ್ಯಂತ ನಾಳೆಯಿಂದಲೇ ಹೊಸ ಲಾಕ್ ಡೌನ್ ನಿಯಮ ಜಾರಿಗೆ ಬರಲಿದೆ. ವಿವಿಧ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು, ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೊನ ಲಾಕ್ ಡೌನ್ ನಿಯಮ ಘೋಷಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಹೊಸ ಲಾಕ್ ಡೌನ್ ನಿಯಮವೇನು?
ಜುಲೈ 16ರಿಂದ ಪ್ರತಿದಿನ ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ವ್ಯಾಪಾರ, ವಹಿವಾಟಿಗೆ ಅವಕಾಶವಿದೆ. ಮಧ್ಯಾಹ್ನ 2 ಗಂಟೆ ಬಳಿಕ ಜಿಲ್ಲೆಯಾದ್ಯಂತ ಲಾಕ್ ಡೌನ್ ಆಗಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಮುಂದಿನ ಆದೇಶದವರೆಗೆ ಈ ನಿಯಮ ಜಾರಿಯಲ್ಲಿ ಇರಲಿದೆ.
ಏನಿರುತ್ತೆ? ಏನಿರಲ್ಲ?
ಪ್ರತಿದಿನ ಬೆಳಗ್ಗೆ 5 ರಿಂದ ಮಧ್ಯಾಹ್ನ 2 ಗಂಟೆವರೆಗೆ ಎಲ್ಲ ವ್ಯಾಪಾರ, ವ್ಯವಹಾರಕ್ಕೆ ಅವಕಾಶ ಇದೆ. ಮಧ್ಯಾಹ್ನ 2 ಗಂಟೆ ಬಳಿಕ ಎಲ್ಲವು ಬಂದ್ ಆಗಲಿದೆ ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ. ಪೆಟ್ರೋಲ್ ಬಂಕ್, ಮದ್ಯದ ಅಂಗಡಿಗಳು ಸೇರಿದಂತೆ ಎಲ್ಲ ವ್ಯವಹಾರಗಳು ಮದ್ಯಾಹ್ನ 2 ಗಂಟೆಗೆ ಬಂದ್ ಆಗಲಿದೆ.
ಫ್ಯಾಕ್ಟರಿಗಳಿಗೆ ಎರಡು ಶಿಫ್ಟ್
ಲಾಕ್ ಡೌನ್ ಅವಧಿಯಲ್ಲೂ ಕಾರ್ಖಾನೆಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಕಾರ್ಖಾನೆಗೆ ಬರುವ ಕಾರ್ಮಿಕರಿಗೆ ಕಡ್ಡಾಯವಾಗಿ ಪಾಸ್ಗಳನ್ನು ನೀಡಲಾಗುತ್ತದೆ. ಪಾಸ್ ಇದ್ದವರಿಗಷ್ಟೆ ರಸ್ತೆಗಿಳಿಯಲು ಅವಕಾಶ ಕಲ್ಪಿಸಲಾಗುತ್ತದೆ. ಪಾಸ್ ಪಡೆದುಕೊಳ್ಳುವ ಜವಾಬ್ದಾರಿ ಕಾರ್ಖಾನೆ ಮಾಲೀಕರಿಗೆ ಸೇರಿದ್ದು ಎಂದು ಸಚಿವ ಈಶ್ವರಪ್ಪ ಸ್ಪಷ್ಟಪಡಿಸಿದರು.
ಕೃಷಿ ಚಟುವಟಿಕೆಗೆ ಓಕೆ
ಜಿಲ್ಲೆಯಾದ್ಯಂತ ಮಧ್ಯಾಹ್ನದಿಂದ ಲಾಕ್ ಡೌನ್ ಇದ್ದರೂ, ಕೃಷಿ ಚಟುವಟಿಕೆಗೆ ಯಾವುದೇ ನಿರ್ಬಂಧ ಇಲ್ಲ. ಗ್ರಾಮೀಣ ಪ್ರದೆಶದಲ್ಲಿ ಕೃಷಿ ಚಟುವಟಿಕೆಯನ್ನು ನಡೆಸಲು ಅಕವಾಶವಿದೆ.
ಮದುವೆಗೆ ರೂಲ್ಸ್, ಹಬ್ಬಗಳು ಕ್ಯಾನ್ಸಲ್
ಕೋವಿಡ್ ಸಂದರ್ಭದಲ್ಲಿ ಮದುವೆಗಳಿಗೆ ಸರ್ಕಾರ ನಿರ್ಬಂಧ ವಿಧಿಸಿದೆ. 50 ಜನಕ್ಕಿಂತಲೂ ಹೆಚ್ಚಿನ ಜನರು ಮದುವೆ ಸಮಾರಂಭದಲ್ಲಿ ಭಾಗವಹಿಸಲು ಅವಕಾಶವಿಲ್ಲ. ಇನ್ನು, ಯಾವುದೇ ಧರ್ಮದ ಹಬ್ಬಗಳನ್ನು ಸಾಮೂಹಿಕವಾಗಿ ನಡೆಸಲು ಅವಕಾಶವಿಲ್ಲ. ತಮ್ಮ ಮನೆಗಳಲ್ಲಷ್ಟೆ ಹಬ್ಬ ಆಚರಿಸಲು ಅವಕಾಶ ಕಲ್ಪಿಸಲಾಗಿದೆ.
ಪೊಲೀಸರಿಗೆ ಪೂರ್ಣ ಅಧಿಕಾರ
ಗುಂಪು ಸೇರುವುದು, ಅನಗತ್ಯವಾಗಿ ಓಡಾಡುವವುದನ್ನು ತಡೆಯುವ ಸಲುವಾಗಿ ಪೊಲೀಸ್ ಇಲಾಖೆಗೆ ಪೂರ್ಣ ಅಧಿಕಾರ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಮಾಸ್ಕ್ ಧರಿಸದೆ ಬಂದವರಿಗೆ 200 ರೂ. ದಂಡ ಮತ್ತು ಇತರೆ ದಂಡಗಳನ್ನು ಪೊಲೀಸ್ ಇಲಾಖೆ ನಿರ್ಧರಿಸಲಿದೆ ಎಂದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]