SHIVAMOGGA LIVE NEWS | 17 APRIL 2024
SHIMOGA : ಯುಪಿಎಸ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಶಿವಮೊಗ್ಗದ ಐ.ಎನ್.ಮೇಘನಾ 589ನೇ ರ್ಯಾಂಕ್ ಪಡೆದಿದ್ದಾರೆ. ಈ ಬಾರಿ ಅವರಿಗೆ ಐಎಎಸ್ ಹುದ್ದೆ ಲಭಿಸುವ ಸಾಧ್ಯತೆ ಇದೆ.
ಮೇಘನಾ ಅವರು ಕಳೆದ ವರ್ಷ ಯುಪಿಎಸ್ಸಿ ಪರೀಕ್ಷೆಯಲ್ಲಿ 617ನೇ ರ್ಯಾಂಕ್ ಪಡೆದಿದ್ದರು. ಹಾಗಾಗಿ ಅವರಿಗೆ ಐಪಿಎಸ್ ಹುದ್ದೆ ಲಭಿಸಿತ್ತು. ಮಹಾರಾಷ್ಟ್ರ ಕೇಡರ್ನ ಅಧಿಕಾರಿಯಾಗಿ ತರಬೇತಿ ಪಡೆಯುತ್ತಿದ್ದಾರೆ. ಈ ಬಾರಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತಮ ರ್ಯಾಂಕ್ ಪಡೆದಿದ್ದು ಐಎಎಸ್ ಹುದ್ದೆಯ ನಿರೀಕ್ಷೆಯಲ್ಲಿದ್ದಾರೆ.
ಯಾರು ಈ ಮೇಘನಾ?
ನಿವೃತ್ತ ಡಿಸಿಎಫ್ ಐ.ಎಂ.ನಾಗರಾಜ್ ಹಾಗೂ ಜಿ.ಜಿ.ನಮಿತಾ ದಂಪತಿ ಪುತ್ರಿ ಮೇಘನಾ. ಮೈಸೂರು ಜಿಲ್ಲೆ ಬಂಡೀಪುರ ಮತ್ತು ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ್ದಾರೆ. ಶಿವಮೊಗ್ಗದ ಸಾಂದೀಪನಿ ಇಂಗ್ಲಿಷ್ ಶಾಲೆಯಲ್ಲಿ ಪ್ರೌಢಶಿಕ್ಷಣ, ಶಿವಮೊಗ್ಗದ ಪೇಸ್ ಕಾಲೇಜಿನಲ್ಲಿ ಪಿಯುಸಿ ಹಾಗೂ ಬೆಂಗಳೂರಿನ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಮಿಕಲ್ ಎಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲುವು ತಪ್ಪಿಸಲು ಯಾರಿಂದಲು ಸಾಧ್ಯವಿಲ್ಲ, ಏ.18ರಂದೇ ಕಾಣಲಿದೆ ಗೆಲುವಿನ ಸಂಭ್ರಮ