ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 30 ಜುಲೈ 2019
ಶಿವಮೊಗ್ಗ ಟ್ರಾಫಿಕ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಕರ್ಕಶ ಶಬ್ದ ಮಾಡುವ ಸೈಲೆನ್ಸರ್ ಅಳವಡಿಸಿಕೊಂಡು ಶಿವಮೊಗ್ಗ ನಗರದಲ್ಲಿ ಸಂಚರಿಸುತ್ತಿದ್ದ ಬುಲೆಟ್’ಗಳನ್ನು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ನಗರದ ಪಶ್ಚಿಮ ಪೊಲೀಸ್ ಠಾಣೆಯ ಪಿಎಸ್ಐ ಮಂಜುನಾಥ್ ಅವರ ನೇತೃತ್ವದಲ್ಲಿ ದಾಳಿ ನಡೆಸಿದ ಸಿಬ್ಬಂದಿ, 41 ಬುಲೆಟ್ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಬೈಕ್ ಸವಾರರ ವಿರುದ್ಧ ಇಂಡಿಯನ್ ಮೋಟಾರ್ ವೆಹಿಕಲ್ ಕಾಯ್ದೆ ಅನ್ವಯ ಕೇಸು ದಾಖಲಿಸಲಾಗಿದೆ.
ಗ್ಯಾರೇಜ್ ಮಾಲೀಕರಿಗೆ ನೊಟೀಸ್
ಇನ್ನು, ಕರ್ಕಶ ಶಬ್ದ ಮಾಡುವ ಸೈಲೆನ್ಸರ್ ಅಳವಿಡಿಸುವ ಗ್ಯಾರೇಜ್ ಮಾಲೀಕರಿಗೂ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ನೊಟೀಸ್ ನೀಡಿ, ಖಡಕ್ ವಾರ್ನಿಂಗ್ ಕೂಡ ಕೊಡಲಾಗಿದೆ.

ಮತ್ತೊಂದೆಡೆ ಟ್ರಾಫಿಕ್ ಪೊಲೀಸರ ಈ ಕಾರ್ಯಾಚರಣೆಗೆ ಶಿವಮೊಗ್ಗದ ನಾಗರೀಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಮೆಚ್ಚುಗೆಯ ಸ್ಟೇಟಸ್ ಹಾಕಲಾಗುತ್ತಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]