ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SAGARA NEWS | 7 ಜನವರಿ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿರುವ ಬೆನ್ನಿಗೆ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಭಕ್ತರಿಗೆ ಮಹತ್ವದ ಸೂಚನೆ ನೀಡಿದೆ. ವೀಕೆಂಡ್ ಕರ್ಫ್ಯೂ ಸಂದರ್ಭ ದೇವಸ್ಥಾನವನ್ನು ಸಂಪೂರ್ಣ ಬಂದ್ ಮಾಡಲಾಗುತ್ತದೆ ಎಂದು ತಿಳಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ವೀಕೆಂಡ್ ಕರ್ಫ್ಯೂ ಹಿನ್ನೆಲೆ ಶನಿವಾರ ಮತ್ತು ಭಾನುವಾರದಂದು ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನವನ್ನು ಸಂಪೂರ್ಣ ಬಂದ್ ಮಾಡಲಾಗುತ್ತದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಇನ್ನು, ಸೋಮವಾರದಿಂದ ಶುಕ್ರವಾರದವರೆಗೆ ಕೋವಿಡ್ ಮಾರ್ಗಸೂಚಿಯಂತೆ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದೆ.
ವೀಕೆಂಡ್ ಸಂದರ್ಭ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ದೊಡ್ಡ ಸಂಖ್ಯೆಯ ಭಕ್ತರು ಬರುತ್ತಾರೆ. ದೇವಿಯ ದರ್ಶನ ಪಡೆಯುತ್ತಾರೆ. ಆದರೆ ಸರ್ಕಾರ ಕರೋನ ನಿಯಂತ್ರಣಕ್ಕೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ ಹಿನ್ನೆಲೆಯಲ್ಲಿ ಶನಿವಾರ, ಭಾನುವಾರ ದೇವಸ್ಥಾನ ಬಂದ್ ಮಾಡಲಾಗುತ್ತಿದೆ.
ಶ್ರೀಧರ ಆಶ್ರಮಯವು ಬಂದ್
ಇತ್ತ ವರದಳ್ಳಿಯ ಶ್ರೀಧರಾಶ್ರಮವು ವೀಕೆಂಡ್ ಕರ್ಫ್ಯೂ ಸಂದರ್ಭ ಬಂದ್ ಮಾಡಲಾಗುತ್ತದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಶನಿವಾರ ಮತ್ತು ಭಾನುವಾರ ಭಕ್ತರು ಆಶ್ರಮ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ. ಉಳಿದ ದಿನಗಳಂದು ಕೋವಿಡ್ ನಿಯಮ ಪಾಲನೆ ಮಾಡಿಕೊಂಡು ಕೋವಿಡ್ ಆಶ್ರಮ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.