ಶಿವಮೊಗ್ಗ ಲೈವ್.ಕಾಂ | SHIMOGA | 23 ಜನವರಿ 2020

ಶಿವಮೊಗ್ಗ ಯಶವಂತಪುರ ತತ್ಕಾಲ್ ಎಕ್ಸ್’ಪ್ರೆಸ್ ರೈಲಿಗೆ ಸಂಸದ ಬಿ.ವೈ.ರಾಘವೇಂದ್ರ ಇವತ್ತು ಚಾಲನೆ ನೀಡಿದರು. ರೈಲ್ವೆ ನಿಲ್ದಾಣದಲ್ಲಿ ಮಧ್ಯಾಹ್ನ ನೂತನ ರೈಲಿಗೆ ಹಸಿರು ನಿಶಾನೆ ತೋರಿಸಲಾಯಿತು.
ಶಿವಮೊಗ್ಗ ಹಾಗೂ ಯಶವಂತಪುರ ನಡುವೆ ಆರಂಭದಲ್ಲಿ ನಾಲ್ಕು ದಿನಗಳ ಕಾಲ ಈ ರೈಲು ಸಂಚರಿಸಲಿದೆ. ನಂತರ ವಾರದ ಏಳು ದಿನವೂ ರೈಲು ಸೇವೆಯನ್ನು ನೀಡಲಿದೆ. ಬೆಳಗ್ಗೆ 9 ಗಂಟೆಗೆ ಯಶವಂತಪುರದಿಂದ ಹೊರಡುವ ರೈಲು ಮಧ್ಯಾಹ್ನ 2.45ಕ್ಕೆ ಶಿವಮೊಗ್ಗ ತಲುಪಲಿದೆ. ಮಧ್ಯಾಹ್ನ 3.30ಕ್ಕೆ ಶಿವಮೊಗ್ಗದಿಂದ ಹೊರಡುವ ರೈಲು ರಾತ್ರಿ 9 ಗಂಟೆಗೆ ಯಶವಂತಪುರ ತಲುಪಲಿದೆ.
ಶಾಸಕ ಅಶೋಕ ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ರುದ್ರೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಮೇಯರ್ ಲತಾ ಗಣೇಶ್, ಆರ್ಯ ವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಶಾಂತರಾಜು, ರೈಲ್ವೆ ಸಲಹಾ ಸಮಿತಿ ಸದಸ್ಯ ಸಿ.ಹೆಚ್.ಮಾಲ್ತೇಶ್ ಮತ್ತಿತರರು ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
Shimoga MP BY Raghavendra Flagged off the new train from Shimoga to Yeshwanthpura.