ಶಿವಮೊಗ್ಗ ಲೈವ್.ಕಾಂ | SHIMOGA NEWS | 11 MARCH 2021
ಲಂಡನ್ನಿಂದ ಹಿಂತಿರುಗಿದವರಲ್ಲಿ ಕಾಣಿಸಿಕೊಂಡಿದ್ದ ರೂಪಾಂತರಿ ವೈರಸ್ನಿಂದ ಜನರು ಆತಂಕಕ್ಕೀಡಾಗಿದ್ದರು. ಈಗ ದಕ್ಷಿಣ ಆಫ್ರಿಕಾದ ರೂಪಾಂತರಿ ಕರೋನ ವೈರಸ್ ಪತ್ತೆಯಾಗಿದೆ. ಶಿವಮೊಗ್ಗಕ್ಕೆ ಹಿಂತಿರುಗಿದ್ದ ವ್ಯಕ್ತಿಯೊಬ್ಬರಲ್ಲಿ ಈ ವೈರಸ್ ಕಾಣಿಕೊಂಡಿದೆ ಎಂದು ಹೇಳಲಾಗುತ್ತಿದೆ.
18 ದಿನದ ಹಿಂದೆ ದಕ್ಷಿಣ ಆಫ್ರಿಕಾದಿಂದ ಶಿವಮೊಗ್ಗದ ಜೆ.ಪಿ.ನಗರಕ್ಕೆ ಈ ವ್ಯಕ್ತಿ ಹಿಂತಿರುಗಿದ್ದರು. ಇವರಲ್ಲಿ ಸೋಂಕು ಕಾಣಿಸಿಕೊಂಡಿರುವುದಾಗಿ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ನಡೆಸಲಾಗಿದೆ. ಇವರಿಗೆ ಕರೋನ ನೆಗೆಟಿವ್ ಬಂದಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ | ಶಿವಮೊಗ್ಗದ ನಾಲ್ಕು ಮಂದಿಯಲ್ಲಿ ರೂಪಾಂತರಿ ಕರೋನ ವೈರಸ್ ಪತ್ತೆ
ದಕ್ಷಿಣ ಆಫ್ರಿಕಾದಲ್ಲಿ ರೂಪಾಂತರಿ ಕರೋನ ವೈರಸ್ನ ಭೀತಿ ಉಂಟಾಗಿದೆ. ವಿಮಾನ ನಿಲ್ದಾಣಕ್ಕೆ ಬಂದಾಗ ಶಿವಮೊಗ್ಗದ ವ್ಯಕ್ತಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಇದೀಗ ವರದಿ ಬಂದಿದ್ದು ಕರೋನ ಪಾಸಿಟಿವ್ ಎಂದು ತಿಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಂಡು, ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಿತ್ತು.
ಇದನ್ನೂ ಓದಿ | ಶಿವಮೊಗ್ಗದಲ್ಲಿ ರೂಪಾಂತರಿ ವೈರಸ್, ಮನೆ ಮತ್ತೊಮ್ಮೆ ಸ್ಯಾನಿಟೈಸ್, ನಾಲ್ವರು ವಿದೇಶದಿಂದ ಬಂದಿದ್ಯಾವಾಗ?
ವ್ಯಕ್ತಿಯಲ್ಲಿ ಕರೋನ ಲಕ್ಷಣಗಳಿಲ್ಲ, ರಿಪೋರ್ಟ್ ಕೂಡ ನೆಗೆಟಿವ್ ಬಂದಿದೆ. ಹಾಗಾಗಿ ಯಾವುದೇ ಆತಂಕವಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೂಲಗಳು ತಿಳಿಸಿವೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]