ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | STATE NEWS | 26 ಜುಲೈ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಕನ್ನಡ ಚಿತ್ರರಂಗದ ಅಭಿನಯ ಶಾರದೆ, ಹಿರಿಯ ನಟಿ ಜಯಂತಿ (76) ವಿಧಿವಶರಾಗಿದ್ದಾರೆ. ಬೆಂಗಳೂರಿನ ತಮ್ಮ ಮನೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಅಸ್ತಮ ಮತ್ತು ವಯೋಸಹಜ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು. ಅನಾರೋಗ್ಯದ ಕಾರಣ ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದರು.
500ಕ್ಕೂ ಹೆಚ್ಚು ಸಿನಿಮಾಗಳು
ಜಯಂತಿ ಅವರು 500ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡ, ಹಿಂದಿ, ತಮಿಳು, ಮಲಯಾಳಂ, ತೆಲುಗು ಸಿನಿಮಾಗಳಲ್ಲಿ ನಟಿಸಿದ್ದರು. 1963ರಲ್ಲಿ ವೈ.ಆರ್.ಸ್ವಾಮಿ ನಿರ್ದೇಶನದ ಜೇನುಗೂಡು ಚಿತ್ರದ ಮೂಲಕ ಜಯಂತಿ ಅವರು ಸಿನಿಮಾರಂಗಕ್ಕೆ ಪ್ರವೇಶಿಸಿದ್ದರು.
ಆರು ಭಾಷೆಯಲ್ಲಿ ನಟನೆ
ಜಯಂತಿ ಕನ್ನಡದ 190 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ನಿರ್ಮಾಪಕಿ, ನಿರ್ದೇಶಕಿಯಾಗಿ ಸೇವೆ ಸಲ್ಲಿಸಿದ್ದರು. ಇವರು 1965ರ ಮಿಸ್ ಲೀಲಾವತಿ ಸಿನಿಮಾದ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. 1969ರ ಎರಡು ಮುಖ, 1976ರ ಮನಸ್ಸಿನಂತೆ ಮಾಂಗಲ್ಯ, 1981ರ ಧರ್ಮ ದಾರಿ ತಪ್ಪಿತು, 1985ರ ಮಸಣದ ಹೂವು, 1986ರ ಆನಂದ್ ಚಿತ್ರಗಳಲ್ಲಿನ ಅಭಿನಯಕ್ಕಾಗಿ ಐದು ಬಾರಿ ರಾಜ್ಯ ಪ್ರಶಸ್ತಿ ಗಳಿಸಿದ್ದಾರೆ. ಎಡಕಲ್ಲು ಗುಡ್ಡದ ಮೇಲೆ ಚಿತ್ರದಲ್ಲಿ ಜಯಂತಿ ವಿಶಿಷ್ಟ ಅಭಿನಯ ಮಾಡಿದ್ದರು.