JUST MAHITI : ತಿರುಪತಿ ಲಡ್ಡು ಪ್ರಸಾದ ತಯಾರಿಕೆಗೆ ಬಳಸುತ್ತಿದ್ದ ತುಪ್ಪದಲ್ಲಿ (Ghee) ಪ್ರಾಣಿಗಳ ಕೊಬ್ಬು ಬಳಕೆ ಮಾಡಿರುವುದು ಬೆಳಕಿಗೆ ಬರುತ್ತಿದ್ದಂತೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿವೆ. ನಂದಿನಿ ತುಪ್ಪ ಹೊರತು ಉಳಿದ ಎಲ್ಲ ಕಂಪನಿಗಳ ತುಪ್ಪದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ.
ಈ ಸಂಬಂಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ತಿರುಪತಿ ಲಡ್ಡು ವಿಚಾರದಲ್ಲಿ ಜನರು ಆತಂಕಕ್ಕೀಡಾಗಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಕರ್ನಾಟಕಕ್ಕೆ ತುಪ್ಪ ಪೂರೈಕೆಯಾಗುತ್ತಿದೆ. ಎಲ್ಲ ತುಪ್ಪವನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದರು.
![]() |
ಪ್ರತಿ ಜಿಲ್ಲೆಯಲ್ಲಿ ಮಾದರಿ ಸಂಗ್ರಹ
ಜಿಲ್ಲಾ ಅಂಕಿತಾಧಿಕಾರಿಗಳು ಪ್ರತಿ ಜಿಲ್ಲೆಯಲ್ಲಿ ತಲಾ ಐದರಂತೆ ಖಾಸಗಿ ಬ್ರ್ಯಾಂಡ್‌ಗಳ ತುಪ್ಪದ ಮಾದರಿ ಸಂಗ್ರಹಿಸಬೇಕು. ಆಯಾ ವಿಭಾಗಕ್ಕೆ ಸಂಬಂಧಿಸಿದ ಸರ್ಕಾರಿ ಆಹಾರ ಪ್ರಯೋಗಾಲಯಗಳಿಗೆ ಕಳುಹಿಸಿ ವಿಶ್ಲೇಷಣೆ ನಡೆಸಬೇಕು. ಪ್ರಾಣಿಗಳ ಕೊಬ್ಬು ಇರುವ ಬಗ್ಗೆ ಗುಣಮಟ್ಟದ ವಿಶ್ಲೇಷಣೆ ನಡೆಸಬೇಕು. ಆಹಾರ ಮಾದರಿ ಸಂಗ್ರಹಣೆಯ ವಿವರಗಳನ್ನು ಪ್ರಯೋಗಾಲಯದ ಹೆಸರಿನ ಜೊತೆ ದಾಖಲಿಸಬೇಕು’ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಉಪ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಿಂದ ದೆಹಲಿಗೆ ವಿಮಾನ, ಮುಂಬೈಗೆ ಯಾಕೆ ಸಿಕ್ತಿಲ್ಲ ಕ್ಲಿಯರೆನ್ಸ್? ಸಂಸದರು ಹೇಳಿದ್ದೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200