ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
JUST MAHITI : ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಸೃಷ್ಟಿಸಿ, ಹಬ್ಬಿಸುವವರಿಗೆ ಬಿಸಿ ಮುಟ್ಟಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆ ಕಾನೂನು ರೂಪಿಸಿದ್ದು, ಫ್ಯಾಕ್ಟ್ ಚೆಕ್ (Fact Check) ಮಾಡಲಾಗುತ್ತದೆ. ಸುಳ್ಳು ಸುದ್ದಿ ಪತ್ತೆಗೆ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ತಂಡ ಕಾರ್ಯಾಚರಿಸಲಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಮೈಸೂರಿನ ಮಾನಸ ಗಂಗೋತ್ರಿ ಆವರಣದಲ್ಲಿ ಮೈಸೂರು ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇವತ್ತು ಎಲ್ಲರು ಪತ್ರಕರ್ತರಾಗಿದ್ದಾರೆ. ಆದರೆ ಪತ್ರಕರ್ತರಲ್ಲದವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ತಮ್ಮ ವಿರುದ್ಧವು ಸುಳ್ಳು ಸುದ್ದಿಗಳನ್ನು ಸೃಷ್ಟಿಸಲಾಗಿದೆ. ಫೇಕ್ ನ್ಯೂಸ್‌ಗಳಿಂದಾಗಿ ಧಾರ್ಮಿಕ, ಸಾಮಾಜಿಕ ಘರ್ಷಣೆಗಳು ಉಂಟಾಗುತ್ತವೆ. ನಮ್ಮ ಜೊತೆಯಲ್ಲಿರುವವರಿಗೇ ತೊಂದರೆಯಾಗಲಿದೆ. ಅದ್ದರಿಂದ ಇದರ ನಿಯಂತ್ರಣ ಮಾಡಬೇಕಿದೆ ಎಂದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸಲು ಕಾನೂನು ರೂಪಿಸಲಾಗಿದೆ. ಠಾಣೆಗಳಲ್ಲಿ ಪ್ರತ್ಯೇಕ ತಂಡ ಫ್ಯಾಕ್ಟ್ ಚೆಕ್ ಮಾಡಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದ ಕ್ರಾಂತಿದೀಪ ಪತ್ರಿಕೆ ಸಂಪಾದಕರಿಗೆ ಪ್ರತಿಷ್ಠಿತ ಪ್ರಶಸ್ತಿ