ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 7 DECEMBER 2023
RAILWAY NEWS : ನೈಋತ್ಯ ರೈಲ್ವೆ (Railway) ವಿಭಾಗದಲ್ಲಿ ಜನಪ್ರಿಯವಾಗುತ್ತಿರುವ ಮಾರ್ಗ ಮೈಸೂರು – ಶಿವಮೊಗ್ಗ ರೈಲ್ವೆ ರೂಟ್. ಸದ್ಯ ಈ ಮಾರ್ಗದಲ್ಲಿ ನಾಲ್ಕು ರೈಲುಗಳು ಸಂಚರಿಸುತ್ತಿವೆ. ಎಲ್ಲ ರೈಲುಗಳಲ್ಲು ಪ್ರಯಾಣಿಕರ ದಟ್ಟಣೆ ಹೆಚ್ಚಿದೆ.
ಯಾವ್ಯಾವ ರೈಲಿನ ಟೈಮಿಂಗ್ ಏನು?
ಮೈಸೂರು – ತಾಳಗುಪ್ಪ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16206) – ಬೆಳಗ್ಗೆ 6 ಗಂಟೆಗೆ ಹೊರಡಲಿದೆ. ಬೆಳಗ್ಗೆ 11 ಗಂಟೆಗೆ ಶಿವಮೊಗ್ಗ ತಲುಪಲಿದೆ. ಮಧ್ಯಾಹ್ನ 1.15ಕ್ಕೆ ತಾಳಗುಪ್ಪ ತಲುಪಲಿದೆ.
ಮೈಸೂರು – ಶಿವಮೊಗ್ಗ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16225) – ಬೆಳಗ್ಗೆ 10.15ಕ್ಕೆ ಹೊರಡಲಿದೆ. ಸಂಜೆ 6.40ಕ್ಕೆ ಶಿವಮೊಗ್ಗ ತಲುಪಲಿದೆ.
ಇದನ್ನೂ ಓದಿ- ಶಿವಮೊಗ್ಗದಲ್ಲಿ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿ, ದಾವಣಗೆರೆ, ಚಿತ್ರದುರ್ಗ ರೈತರಿಗು ಇದೆ ಅವಕಾಶ
ಮೈಸೂರು – ತಾಳಗುಪ್ಪ ಕುವೆಂಪು ಎಕ್ಸ್ಪ್ರೆಸ್ (ರೈಲು ಸಂಖ್ಯೆ 16222) – ಮಧ್ಯಾಹ್ನ 2 ಗಂಟೆಗೆ ಹೊರಡಲಿದೆ. ರಾತ್ರಿ 8.35ಕ್ಕೆ ಶಿವಮೊಗ್ಗ ತಲುಪಲಿದೆ. ರಾತ್ರಿ 11 ಗಂಟೆಗೆ ತಾಳಗುಪ್ಪ ತಲುಪಲಿದೆ.
ಮೈಸೂರು – ತಾಳಗುಪ್ಪ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16227) – ರಾತ್ರಿ 7.30ಕ್ಕೆ ಹೊರಡಲಿದೆ. ಬೆಂಗಳೂರಿನಿಂದ ರಾತ್ರಿ 11.15ಕ್ಕೆ ಹೊರಡಲಿದೆ. ಬೆಳಗ್ಗೆ 5 ಗಂಟೆಗೆ ಶಿವಮೊಗ್ಗ ತಲುಪಲಿದೆ. ಬೆಳಗ್ಗೆ 7.15ಕ್ಕೆ ತಾಳಗುಪ್ಪ ತಲುಪಲಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422