ರೈಲ್ವೆ ಸುದ್ದಿ: ಮಾವಿನಕೆರೆ ಮತ್ತು ಹೊಳೆನರಸೀಪುರ ರೈಲು ನಿಲ್ದಾಣಗಳಲ್ಲಿ ಹಳಿಗಳ ನವೀಕರಣ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಕೆಲವು ರೈಲುಗಳ (Trains) ಸಂಚಾರದಲ್ಲಿ ನಿಯಂತ್ರಣವಾಗಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಯಾವೆಲ್ಲ ರೈಲು ಸಂಚಾರದಲ್ಲಿ ನಿಯಂತ್ರಣ?
ಸೆಪ್ಟೆಂಬರ್ 22, 23 ಮತ್ತು 24ರಂದು ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ಮಾರ್ಗ ಮಧ್ಯದಲ್ಲಿ 60 ನಿಮಿಷ ನಿಯಂತ್ರಣವಾಗಲಿದೆ. ಅದೇ ರೀತಿ, ಸೆಪ್ಟೆಂಬರ್ 26ರಂದು ಈ ರೈಲು 65 ನಿಮಿಷಗಳ ಕಾಲ ನಿಯಂತ್ರಣಕ್ಕೆ ಒಳಪಡಲಿದೆ.

ಸೆಪ್ಟೆಂಬರ್ 22, 23 ಮತ್ತು 24ರಂದು ಸಂಚರಿಸುವ ರೈಲು ಸಂಖ್ಯೆ 16221 ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್ ರೈಲು ಕೂಡ ಮಾರ್ಗ ಮಧ್ಯದಲ್ಲಿ 40 ನಿಮಿಷಗಳ ಕಾಲ ನಿಯಂತ್ರಣಕ್ಕೆ ಒಳಗಾಗಲಿದೆ. ಸೆಪ್ಟೆಂಬರ್ 26ರಂದು ಇದೇ ರೈಲು 15 ನಿಮಿಷಗಳ ಕಾಲ ನಿಯಂತ್ರಣಗೊಳ್ಳಲಿದೆ.

ಇದನ್ನೂ ಓದಿ » ಸಕ್ರೆಬೈಲು ಆನೆಗಳಿಗೆ ಶಿವಮೊಗ್ಗ ದಸರಾಕ್ಕೆ ಆಹ್ವಾನ, ಯಾವೆಲ್ಲ ಆನೆಗಳು ಭಾಗವಹಿಸಲಿವೆ? ಇಲ್ಲಿದೆ ಡಿಟೇಲ್ಸ್
Shimoga, Talaguppa, Mysore, Trains, railway,
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





