ಯಾವ್ಯಾವ ರೈಲು ಯಾವಾಗ ಹೊರಡುತ್ತವೆ?
♦ ಕುವೆಂಪು ಎಕ್ಸ್‌ಪ್ರೆಸ್ : ತಾಳಗುಪ್ಪದಿಂದ ಬೆಳಗ್ಗೆ 6.15ಕ್ಕೆ ಹೊರಡಲಿದೆ. ಶಿವಮೊಗ್ಗದಿಂದ ಬೆಳಗ್ಗೆ 8.20ಕ್ಕೆ ಹೊರಡಲಿದೆ. ಮಧ್ಯಾಹ್ನ 3.35ಕ್ಕೆ ಮೈಸೂರು ರೈಲ್ವೆ ನಿಲ್ದಾಣ ತಲುಪಲಿದೆ. ಶಿವಮೊಗ್ಗದಿಂದ ಹಾಸನ ಮಾರ್ಗವಾಗಿ ಮೈಸೂರಿಗೆ ತೆರಳಲಿದೆ. ವಾರದ ಎಲ್ಲ ದಿನವು ಈ ರೈಲು ಸಂಚರಿಸಲಿದೆ.
♦ ಶಿವಮೊಗ್ಗ – ಮೈಸೂರು ಎಕ್ಸ್‌ಪ್ರೆಸ್ : ಬೆಳಗ್ಗೆ 11.15ಕ್ಕೆ ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಹೊರಡಲಿದೆ. ಸಂಜೆ 5.05ಕ್ಕೆ ಮೈಸೂರು ನಿಲ್ದಾಣ ತಲುಪಲಿದೆ. ಶಿವಮೊಗ್ಗದಿಂದ ಹಾಸನ ಮಾರ್ಗವಾಗಿ ಮೈಸೂರಿಗೆ ತೆರಳಲಿದೆ. ವಾರದ ಎಲ್ಲ ದಿನವು ಈ ರೈಲು ಸಂಚರಿಸಲಿದೆ.

♦ ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್ : ತಾಳಗುಪ್ಪದಿಂದ ಮಧ್ಯಾಹ್ನ 2.50ಕ್ಕೆ ಹೊರಡಲಿದೆ. ಶಿವಮೊಗ್ಗದಿಂದ ಸಂಜೆ 4.50ಕ್ಕೆ ಹೊರಡಲಿದೆ. ರಾತ್ರಿ 10.30ಕ್ಕೆ ಮೈಸೂರು ನಿಲ್ದಾಣ ತಲುಪಲಿದೆ. ಶಿವಮೊಗ್ಗದಿಂದ ಹಾಸನ ಮಾರ್ಗವಾಗಿ ಮೈಸೂರಿಗೆ ತೆರಳಲಿದೆ. ವಾರದ ಎಲ್ಲ ದಿನವು ಈ ರೈಲು ಸಂಚರಿಸಲಿದೆ.
♦ ತಾಳಗುಪ್ಪ – ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ : ತಾಳಗುಪ್ಪದಿಂದ ರಾತ್ರಿ 8.55ಕ್ಕೆ ಹೊರಡಲಿದೆ. ಶಿವಮೊಗ್ಗದಿಂದ 11 ಗಂಟೆಗೆ ಹೊರಡಲಿದೆ. ಬೆಳಗ್ಗೆ 4.50ಕ್ಕೆ ಬೆಂಗಳೂರು ನಿಲ್ದಾಣ ತಲುಪಲಿದೆ. ಬೆಳಗ್ಗೆ 8.20ಕ್ಕೆ ಮೈಸೂರು ನಿಲ್ದಾಣ ತಲುಪಲಿದೆ.
ಇದನ್ನೂ ಓದಿ » ರಾಗಿಗುಡ್ಡ ESI ಆಸ್ಪತ್ರೆಗೆ ಕೇಂದ್ರ ಸಚಿವೆ ಭೇಟಿ, ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್‌ಗೆ ಹಾಕುವ ಎಚ್ಚರಿಕೆ
