ರೈಲ್ವೆ ಸುದ್ದಿ: ಸುರಕ್ಷತಾ ಸಂಬಂಧಿತ ಕಾಮಗಾರಿಗಳ ಹಿನ್ನೆಲೆ ಹಾಸನ ಯಾರ್ಡ್‌ನಲ್ಲಿ ಕೆಲವು ರೈಲು ಸೇವೆಗಳಲ್ಲಿ ಬದಲಾವಣೆ (train cancellations) ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಯಾವ್ಯಾವ ರೈಲು ವ್ಯತ್ಯಯ?
ರೈಲು ಸಂಖ್ಯೆ 16206 ಮೈಸೂರು–ತಾಳಗುಪ್ಪ ಎಕ್ಸ್‌ಪ್ರೆಸ್, ರೈಲು ಸಂಖ್ಯೆ 16205 ತಾಳಗುಪ್ಪ–ಮೈಸೂರು ಎಕ್ಸ್‌ಪ್ರೆಸ್ ಮತ್ತು ರೈಲು ಸಂಖ್ಯೆ 56267 ಅರಸೀಕೆರೆ–ಮೈಸೂರು ಪ್ಯಾಸೆಂಜರ್ ರೈಲುಗಳು 2026ರ ಏಪ್ರಿಲ್ 29, ಮೇ 4 ಮತ್ತು ಮೇ 6 ರಂದು ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16225 ಮೈಸೂರು–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ರೈಲು 2026 ಏಪ್ರಿಲ್ 29, ಮೇ 4 ಮತ್ತು ಮೇ 6 ರಂದು ಮೈಸೂರು ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದುಗೊಂಡಿದೆ. ಈ ರೈಲು ಅರಸೀಕೆರೆ ನಿಲ್ದಾಣದಿಂದ ತನ್ನ ನಿಗದಿತ ಸಮಯಕ್ಕೆ ಪ್ರಯಾಣ ಆರಂಭಿಸಲಿದೆ.

ರೈಲು ಸಂಖ್ಯೆ 56266 ಮೈಸೂರು–ಅರಸೀಕೆರೆ ಪ್ಯಾಸೆಂಜರ್ ರೈಲು ಮಾವಿನಕೆರೆ ಮತ್ತು ಅರಸೀಕೆರೆ ನಡುವಿನ ಸೇವೆ ಭಾಗಶಃ ರದ್ದುಗೊಳ್ಳಲಿದೆ. 2026ರ ಏಪ್ರಿಲ್ 29, ಮೇ 4 ಮತ್ತು ಮೇ 6 ರಂದು ಮಾವಿನಕೆರೆ ನಿಲ್ದಾಣದಲ್ಲೇ ತನ್ನ ಪ್ರಯಾಣವನ್ನು ಕೊನೆಗೊಳಿಸಲಿದೆ.
ಇದನ್ನೂ ಓದಿ : ಶಿವಮೊಗ್ಗ ಪಾಲಿಕೆ ಕಮಿಷನರ್ ಹೆಸರಿನಲ್ಲಿ ನಕಲಿ ವಾಟ್ಸಪ್, ಅಧಿಕಾರಿಗಳಿಗೆ ಮೆಸೇಜ್
ರೈಲು ಸಂಖ್ಯೆ 16515 ಯಶವಂತಪುರ–ಕಾರವಾರ ಎಕ್ಸ್‌ಪ್ರೆಸ್ ರೈಲು 2026 ಏಪ್ರಿಲ್ 29, ಮೇ 4 ಮತ್ತು ಮೇ 6 ರಂದು ಬೆಂಗಳೂರು ವಿಭಾಗದಲ್ಲಿ ಸುಮಾರು 65 ನಿಮಿಷಗಳ ವಿಳಂಬದೊಂದಿಗೆ ಸಂಚರಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ









