ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 23 FEBRUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
RAILWAY NEWS : ಮಾವಿನಕೆರೆ ಮತ್ತು ಹೊಳೆ ನರಸೀಪುರ ನಿಲ್ದಾಣಗಳ ನಡುವೆ ಇಂಜಿನಿಯರಿಂಗ್ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಕೆಲವು ರೈಲುಗಳ ಸೇವೆಯಲ್ಲಿ ಬದಲಾವಣೆ ಮಾಡಲಾಗುತ್ತಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಯಾವ ರೈಲು ರದ್ದು?
ಫೆ.24 ಮತ್ತು 25ರಂದು ಅರಸೀಕೆರೆ-ಮೈಸೂರು ವಿಶೇಷ ಎಕ್ಸ್ ಪ್ರೆಸ್ ರೈಲಿನ (ರೈಲು ಸಂಖ್ಯೆ 06213) ಸಂಚಾರ ರದ್ದುಗೊಳ್ಳಲಿದೆ.
ಶಿವಮೊಗ್ಗ ರೈಲು ಭಾಗಶಃ ರದ್ದು
ಫೆ.24 ಮತ್ತು 25ರಂದು ಮೈಸೂರು-ಶಿವಮೊಗ್ಗ ಟೌನ್ ಡೈಲಿ ಎಕ್ಸ್ ಪ್ರೆಸ್ ರೈಲು (ರೈಲು ಸಂಖ್ಯೆ 16225) ಮೈಸೂರು ಮತ್ತು ಅರಸೀಕೆರೆ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.
ರೈಲು ಮಾರ್ಗ ಬದಲಾವಣೆ
ಈಶಾನ್ಯ ಗಡಿನಾಡು ರೈಲ್ವೆಯ ಬಮುನಿಗಾಂವ್ ಮತ್ತು ಚಯಗಾಂವ್ ನಿಲ್ದಾಣಗಳ ನಡುವೆ ನಡೆಯುತ್ತಿರುವ ಜೋಡಿ ಮಾರ್ಗ ಕಾಮಗಾರಿ ಸಲುವಾಗಿ, ಫೆ.23ರಂದು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಪ್ರಾರಂಭಗವಾಗುವ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಅಗರ್ತಲಾ ದ್ವಿ-ಸಾಪ್ತಾಹಿಕ ಹಮ್ಸಫರ್ ಎಕ್ಸ್ ಪ್ರೆಸ್ ರೈಲು (ರೈಲು ಸಂಖ್ಯೆ 12503) ನ್ಯೂ ಬೊಂಗೈಗಾಂವ್, ರಂಗಿಯಾ ಮತ್ತು ಕಾಮಾಕ್ಯ ನಿಲ್ದಾಣಗಳ ಮೂಲಕ ಸಂಚರಿಸಲಿದೆ ಎಂದು ಈಶಾನ್ಯ ಗಡಿನಾಡು ರೈಲ್ವೆಯು ತಿಳಿಸಿದೆ.
ಇದನ್ನೂ ಓದಿ – ವಿದ್ಯಾನಗರದಲ್ಲಿ ರೈಲ್ವೆ ಮೇಲ್ಸೇತುವೆ ಪಕ್ಕದಲ್ಲಿ ಕೆಳ ಸೇತುವೆಗೆ ಒತ್ತಾಯ, ಕಾರಣವೇನು?