ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?

SHIVAMOGGA LIVE NEWS, 20 JANUARY 2025

ಶಿವಮೊಗ್ಗ : ಕಡೂರು ಮತ್ತು ಬೀರೂರು ನಿಲ್ದಾಣದ ಯಾರ್ಡ್‌ಗಳಲ್ಲಿ ಸುರಕ್ಷತೆಗೆ ಸಂಬಂಧಿಸಿದ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಆದ್ದರಿಂದ ವಿವಿಧ ರೈಲುಗಳನ್ನು (Train) ಭಾಗಶಃ ರದ್ದು, ಮರು ವೇಳಾಪಟ್ಟಿ ನಿಗದಿ ಮತ್ತು ನಿಯಂತ್ರಿಸಲಾಗುತ್ತಿದೆ ಎಂದು ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಅಧಿಕಾರಿ ಡಾ. ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈಲುಗಳ ಭಾಗಶಃ ರದ್ದು

ಜನವರಿ 25 ಮತ್ತು ಫೆಬ್ರವರಿ 1ರಂದು ಶಿವಮೊಗ್ಗ ಟೌನ್ – ಚಿಕ್ಕಮಗಳೂರು ಡೈಲಿ ಪ್ಯಾಸೆಂಜರ್ (ರೈಲು ಸಂಖ್ಯೆ 56271) ರೈಲು ಬೀರೂರು ಮತ್ತು ಚಿಕ್ಕಮಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ. ಈ ರೈಲಿನ ಸೇವೆ ಬೀರೂರಿನಲ್ಲಿ ಕೊನೆಗೊಳ್ಳಲಿದೆ.

Prashanth-Loan-Advertisement.

ರೈಲುಗಳ ಮರು ವೇಳಾಪಟ್ಟಿ/ನಿಯಂತ್ರಣ

» ರೈಲು 1

ಜನವರಿ 21 ಮತ್ತು ಫೆಬ್ರವರಿ 4 ರಂದು ಪ್ರಾರಂಭವಾಗುವ ಅರಸೀಕೆರೆ-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ ಪ್ರೆಸ್ ರೈಲು (ರೈಲು ಸಂಖ್ಯೆ 16213) ಅರಸೀಕೆರೆಯಿಂದ 75 ನಿಮಿಷ ತಡವಾಗಿ ಹೊರಡಲಿದೆ.

Electric-Locomotive-train-for-Shimoga

» ರೈಲು 2

ಜನವರಿ 21 ಮತ್ತು ಫೆಬ್ರವರಿ 4 ರಂದು ಪ್ರಾರಂಭವಾಗುವ ಎಸ್ಎಸ್ಎಸ್ ಹುಬ್ಬಳ್ಳಿ-ಸೋಲಾಪುರ ಡೈಲಿ ಪ್ಯಾಸೆಂಜರ್ ರೈಲು (ರೈಲು ಸಂಖ್ಯೆ 56906) ಹುಬ್ಬಳ್ಳಿಯಿಂದ 75 ನಿಮಿಷ ತಡವಾಗಿ ಹೊರಡಲಿದೆ.

» ರೈಲು 3

ಜನವರಿ 25 ಮತ್ತು ಫೆಬ್ರವರಿ 1 ರಂದು ಪ್ರಾರಂಭವಾಗುವ ಎಸ್ಎಸ್ಎಸ್ ಹುಬ್ಬಳ್ಳಿ-ಅರಸೀಕೆರೆ ಡೈಲಿ ಎಕ್ಸ್ ಪ್ರೆಸ್ ರೈಲು (ರೈಲು ಸಂಖ್ಯೆ 16214) ಹುಬ್ಬಳ್ಳಿಯಿಂದ 75 ನಿಮಿಷ ತಡವಾಗಿ ಹೊರಡಲಿದೆ. ಮತ್ತು ಈ ರೈಲು ಮಾರ್ಗ ಮಧ್ಯ 60 ನಿಮಿಷ ನಿಯಂತ್ರಣವಾಗಲಿದೆ.

Kalleshwara-Enterprises.webp

ಇದನ್ನೂ ಓದಿ » ಮೆಗ್ಗಾನ್‌ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment