ಮೈಸೂರು – ತಾಳಗುಪ್ಪ ರೈಲು ಸೇರಿ ಹಲವು ರೈಲುಗಳು ಎರಡು ದಿನ ರದ್ದು, ಕಾರಣವೇನು?

ರೈಲ್ವೆ ಸುದ್ದಿ: ಹೊಳೆನರಸೀಪುರ ಮತ್ತು ಮಾವಿನಕೆರೆ ರೈಲ್ವೆ ನಿಲ್ದಾಣಗಳ ನಡುವೆ ರಸ್ತೆ ಕೆಳಸೇತುವೆ (ಆರ್‌ಯುಬಿ) ಕಾಮಗಾರಿ ನಡೆಸಲಾಗುತ್ತಿದೆ. ಈ ಹಿನ್ನೆಲೆ ಜೂನ್ 18 ಮತ್ತು 23ರಂದು ವಿವಿಧ ರೈಲುಗಳ ಸೇವೆಯನ್ನು ತಾತ್ಕಾಲಿಕವಾಗಿ ರದ್ದು, ಭಾಗಶಃ ರದ್ದು ಮತ್ತು ನಿಯಂತ್ರಣ ಮಾಡಲಾಗುವುದು ಎಂದು ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ ಕನಮಡಿ ತಿಳಿಸಿದ್ದಾರೆ.

ಯಾವ್ಯಾವ ರೈಲುಗಳ ಸಂಚಾರದಲ್ಲಿ ವ್ಯತ್ಯಯ?

ಜೂನ್ 18 ಮತ್ತು 23ರಂದು ಅರಸೀಕೆರೆ–ಮೈಸೂರು ದೈನಂದಿನ ಪ್ಯಾಸೆಂಜರ್ (ರೈಲು ಸಂಖ್ಯೆ 56267), ಮೈಸೂರು–ತಾಳಗುಪ್ಪ ದೈನಂದಿನ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16206) ಮತ್ತು ತಾಳಗುಪ್ಪ–ಮೈಸೂರು ದೈನಂದಿನ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16205) ರೈಲುಗಳ ಸಂಚಾರವನ್ನು ಎರಡು ದಿನಗಳ ಕಾಲ ಸಂಪೂರ್ಣವಾಗಿ ರದ್ದುಗೊಳಿಸಲಾಗುವುದು.

Prayanikare-Gamanisi-Indian-Railway-News

ಇದೇ ದಿನಗಳಲ್ಲಿ ಮೈಸೂರು–ಶಿವಮೊಗ್ಗ ಟೌನ್ ದೈನಂದಿನ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16225) ರೈಲಿನ ಸೇವೆಯನ್ನು ಮೈಸೂರು ಮತ್ತು ಅರಸೀಕೆರೆ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗಿದೆ. ಈ ರೈಲು ಮೈಸೂರಿನ ಬದಲಿಗೆ ಅರಸೀಕೆರೆ ನಿಲ್ದಾಣದಿಂದಲೇ ತನ್ನ ನಿಗದಿತ ಸಮಯಕ್ಕೆ ಶಿವಮೊಗ್ಗದ ಕಡೆಗೆ ಪ್ರಯಾಣ ಆರಂಭಿಸಲಿದೆ.

ಜೂನ್ 18 ಮತ್ತು 23ರಂದು ಮೈಸೂರಿನಿಂದ ಹೊರಡುವ ಮೈಸೂರು–ಯಶವಂತಪುರ ದೈನಂದಿನ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16208) ರೈಲಿನ ಸಂಚಾರವನ್ನು ಮಾರ್ಗಮಧ್ಯೆ ಕ್ರಮವಾಗಿ 30 ನಿಮಿಷ ಮತ್ತು 120 ನಿಮಿಷಗಳ ಕಾಲ ನಿಯಂತ್ರಿಸಿ (ವಿಳಂಬವಾಗಿ) ಓಡಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Bhovi Samaja Prathiba Puraskara

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ