NEWS HIGHLIGHTS
ರೈಲ್ವೆ ಸುದ್ದಿ: ಶಿವಮೊಗ್ಗ – ಬೆಂಗಳೂರು ಜನಶತಾಬ್ದಿ ಮತ್ತು ಹುಬ್ಬಳ್ಳಿ – ಬೆಂಗಳೂರು ಜನಶತಾಬ್ದಿ ರೈಲುಗಳು (train) ತಿಪಟೂರು ನಿಲ್ದಾಣದಲ್ಲಿನ ನಿಲುಗಡೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ಈ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ತಿಪಟೂರು ರೈಲು ನಿಲ್ದಾಣದಲ್ಲಿ ಮುಂದುವರಿಸಲು ನಿರ್ಧರಿಸಿದೆ. ಈ ಪ್ರಾಯೋಗಿಕ ನಿಲುಗಡೆಯು ಇನ್ನೂ ಆರು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ. 2025ರ ಮೇ 16 ರಿಂದ 2025ರ ನವೆಂಬರ್ 15ರವರೆಗೆ ಜಾರಿಯಲ್ಲಿರುತ್ತದೆ.

ಪ್ರಸ್ತುತ ಚಾಲ್ತಿಯಲ್ಲಿರುವ ವೇಳಾಪಟ್ಟಿಯ ಪ್ರಕಾರವೇ ಈ ರೈಲುಗಳು ತಿಪಟೂರು ನಿಲ್ದಾಣದಲ್ಲಿ ನಿಲುಗಡೆಗೊಳ್ಳಲಿವೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ:➤ ಜನಶತಾಬ್ದಿ ರೈಲು: ಅರ್ಧ ಗಂಟೆ ವಿಳಂಬ, ಎಲೆಕ್ಟ್ರಿಕ್ ಇಂಜಿನ್ ಮುಂದೆ ಡಿಸೇಲ್ ಇಂಜಿನ್ ಜೋಡಿಸಿ ಚಾಲನೆ