ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ರೈಲ್ವೆ ಸುದ್ದಿ: ಗುಡ್ ಫ್ರೈಡೇ ಹಬ್ಬದ ಹಿನ್ನೆಲೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಕಡಿಮೆ ಮಾಡಲು ನೈಋತ್ಯ ರೈಲ್ವೆಯು ಯಶವಂತಪುರ – ತಾಳಗುಪ್ಪ ನಡುವೆ ವಿಶೇಷ ರೈಲುಗಳನ್ನು (special train) ಓಡಿಸಲು ನಿರ್ಧರಿಸಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ವಿಶೇಷ ಎಕ್ಸ್ ಪ್ರೆಸ್ ರೈಲು ಏಪ್ರಿಲ್ 3 ರಂದು ರಾತ್ರಿ 10:45ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗ್ಗೆ 5:05ಕ್ಕೆ ತಾಳಗುಪ್ಪ ತಲುಪಲಿದೆ.

Train-Jan-Shatabdi-General-Image

ಇದನ್ನೂ ಓದಿ : ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ ವಿಶೇಷ ಎಕ್ಸ್ ಪ್ರೆಸ್  ಏಪ್ರಿಲ್ 4 ರಂದು ಬೆಳಗ್ಗೆ 9:30ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 5:15ಕ್ಕೆ ಯಶವಂತಪುರ ತಲುಪಲಿದೆ.

Night-Train-at-Shimoga-railway-station.

ಈ ವಿಶೇಷ ರೈಲು ಎರಡು ಮಾರ್ಗಗಳಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು ಜಂಕ್ಷನ್, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಕೊನಗವಳ್ಳಿ ಹಾಲ್ಟ್, ಹಾರನಹಳ್ಳಿ ಹಾಲ್ಟ್, ಕುಂಸಿ, ಅರಸಾಳು ಹಾಲ್ಟ್, ಕೆಂಚನಾಲ ಹಾಲ್ಟ್, ಆನಂದಪುರಂ, ಅಡ್ಡೇರಿ ಹಾಲ್ಟ್ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ. ರೈಲು ಒಟ್ಟು 20 ಬೋಗಿಗಳನ್ನು ಹೊಂದಿರಲಿದೆ. ಅದರಲ್ಲಿ 1 ಪ್ರಥಮ ದರ್ಜೆ ಮತ್ತು ಎಸಿ 2-ಟೈರ್, 2 ಎಸಿ ತ್ರೀ-ಟೈರ್, 10 ಸ್ಲೀಪರ್ ಕ್ಲಾಸ್, 5 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ 2 ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ.

Sunrise Facility Services, Sri sai Trust Shimoga

Leave a Comment