SHIVAMOGGA LIVE NEWS | 30 AUGUST 2023
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
SHIMOGA : ಆರೋಗ್ಯ ಇಲಾಖೆಯ ಕಾರ್ಯಕ್ರಮಗಳು ಮತ್ತು ಯೋಜನೆಗಳ ಬಗ್ಗೆ ಜಾನಪದ ಮಾಧ್ಯಮದಲ್ಲಿ ಬೀದಿ ನಾಟಕಗಳ (Street Play) ಮೂಲಕ ಸಾರ್ವಜನಿಕ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಕ್ರಿಯವಿರುವ ಅರ್ಹ ಕಲಾತಂಡಗಳ ಆಯ್ಕೆ ಮಾಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯೋಜಿಸಿದೆ.
ಏನೇನು ಷರತ್ತು ಇದೆ?
ಕಲಾತಂಡ ಮತ್ತು ಕಲಾವಿದರು ಶಿವಮೊಗ್ಗ ಜಿಲ್ಲೆಯವರಾಗಿರಬೇಕು. ಕಲಾತಂಡದಲ್ಲಿ ಕನಿಷ್ಠ 6-8 ಕಲಾವಿದರಿರಬೇಕು. ಎಲ್ಲಾ ಕಲಾವಿದರು ಭಾವಚಿತ್ರ ಹಾಗೂ ಆಧಾರ್ ಕಾರ್ಡ್ ನಕಲು ಪ್ರತಿ ಮತ್ತು ಕಲಾತಂಡ ನೋಂದಣಿ ಹಾಗೂ ನವೀಕರಣದ ಪ್ರತಿಯೊಂದಿಗೆ ವಿವರವಾದ ಮಾಹಿತಿಯನ್ನು ಸೆ. 05 ರೊಳಗಾಗಿ ಆರೋಗ್ಯಾಧಿಕಾರಿಗಳ ಕಚೇರಿಯ ಐ.ಇ.ಸಿ. ವಿಭಾಗಕ್ಕೆ ಸಲ್ಲಿಸಬೇಕು.
ಇದನ್ನೂ ಓದಿ- ನಿಧಿ ಆಸೆ, ಬೆಂಗಳೂರಿನ ವ್ಯಕ್ತಿಗೆ ಶಿವಮೊಗ್ಗದಲ್ಲಿ ಲಕ್ಷ ಲಕ್ಷ ರೂ. ವಂಚನೆ, ಹೇಗಾಯ್ತು ಮೋಸ?
ಸಮಿತಿ ಮುಂದೆ ಕಲಾ ಪ್ರದರ್ಶನ
ಆಸಕ್ತ ಕಲಾತಂಡಗಳು ಸೆ.12 ರಂದು ಬೆಳಗ್ಗೆ 11.00ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಆಯ್ಕೆ ಸಮಿತಿ ಮುಂದೆ ತಮ್ಮ ಕಲಾ ಪ್ರದರ್ಶನ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಆರೋಗ್ಯಾಧಿಕಾರಿಗಳ ಕಚೇರಿಯ ಐ.ಇ.ಸಿ. ವಿಭಾಗ ಅಥವಾ ದೂ.ಸಂ.: 08182-222382 ನ್ನು ಸಂಪರ್ಕಿಸುವುದು.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






