ಶಿವಮೊಗ್ಗ ಲೈವ್.ಕಾಂ | SHIMOGA | 10 ಫೆಬ್ರವರಿ 2020

ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್’ಟಾಪ್ ವಿತರಿಸುವಂತೆ ಆಗ್ರಹಿಸಿ ಸಾಗರ ಪಟ್ಟಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು. ಎರಡು ವರ್ಷದಿಂದ ವಿದ್ಯಾರ್ಥಿಗಳಿಗೆ ಲ್ಯಾಪ್’ಟಾಪ್ ವಿತರಣೆ ಆಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಸಾಗರದ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಇವತ್ತು ಪ್ರತಿಭಟನೆ ನಡೆಸಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಬಳಿಕ ಉಪ ವಿಭಾಗಾಧಿಕಾರಿ ಮತ್ತು ಶಾಸಕ ಹರತಾಳು ಹಾಲಪ್ಪ ಅವರಿಗೆ ಮನವಿ ಸಲ್ಲಿಸಿದರು.
2017ರಿಂದ ರಾಜ್ಯ ಸರ್ಕಾರ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್’ಟಾಪ್ ವಿತರಿಸುತ್ತಿದೆ. ಆದರೆ ಕಳೆದ ಎರಡು ವರ್ಷ ಲ್ಯಾಪ್’ಟಾಪ್ ವಿತರಣೆ ಸ್ಥಗಿತಗೊಳಿಸಲಾಗಿತ್ತು. ಈ ಬಾರಿ ಪುನಃ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್’ಟಾಪ್ ವಿತರಣೆ ಮಾಡಲಾಗಿದೆ. ಹೀಗಾಗಿ ಈಗ ಪದವಿಯ ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಕೂಡಲೇ ಲ್ಯಾಪ್’ಟಾಪ್ ವಿತರಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.
ವಿನೋದ್ ರಾಜ್ ಶೆಟ್ಟಿ, ಕೀರ್ತನ್, ಇರ್ಷಾದ್, ಭರತ್, ಸುಜಾತಾ, ಪ್ರಮೀಳಾ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]