ಶಿವಮೊಗ್ಗ ಲೈವ್.ಕಾಂ | 19 ಏಪ್ರಿಲ್ 2019
ಇವತ್ತು ಸಂಜೆಯಿಂದ ಎಲ್ಲವೂ ಬದಲಾಗಲಿದೆ. ಭದ್ರಾವತಿ ಮತದಾರರೇ ಮಧು ಬಂಗಾರಪ್ಪ ಅವರ ಗೆಲುವನ್ನು ನಿರ್ಧರಿಸುತ್ತಾರೆ ಅಂತಾ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಅವರ ನಿವಾಸದಲ್ಲಿ ಕಾರ್ಯಕರ್ತರ ದಿಢೀರ್ ಸಭೆ ನಡೆಸಿದ ಡಿ.ಕೆ.ಶಿವಕುಮಾರ್, ಬಳಿಕ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ, ಸಂಗಮೇಶ್ವರ್ ಮತ್ತು ಅಪ್ಪಾಜಿಗೌಡ ಅವರನ್ನು ಒಗ್ಗೂಡದಿರುವ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ, ಇವತ್ತು ಸಂಜೆಯಿಂದಲೇ ಎಲ್ಲವೂ ಬದಲಾಗಲಾಗಿದೆ ಎಂದರು.
ಜೊತೆಗೂಡುವುದು ಆರಂಭ, ಜೊತೆಗೂಡಿ ಚಿಂತಿಸುವುದು ಪ್ರಗತಿ, ಜೊತೆಗೂಡಿ ಕೆಲಸ ಮಾಡುವುದು ಯಶಸ್ಸು. ಹಾಗಾಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಒಗ್ಗೂಡಿ ಕೆಲಸ ಮಾಡಿ, ಬಿಜೆಪಿಯನ್ನು ಎದುರಿಸುತ್ತೇವೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸಿ.ತಮ್ಮಣ್ಣ, ಡಿ.ಕೆ.ಸುರೇಶ್, ಶಾಸಕ ಬಿ.ಕೆ.ಸಂಗಮೇಶ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494ಈ ಮೇಲ್ | [email protected]