ಶಾಲೆ, ಕಾಲೇಜು ರಜೆ ವಿಚಾರ, ಸಿಎಂ ಕಚೇರಿಯಿಂದ ಸ್ಪಷ್ಟನೆ

VIDHANA-SOUDHA-GENERAL-IMAGE.jpg

ಬೆಂಗಳೂರು: ವೃಕ್ಷಮಾತೆ ನಾಡೋಜ ಸಾಲುಮರದ ತಿಮ್ಮಕ್ಕ ನಿಧನದ ಹಿನ್ನೆಲೆ ಶನಿವಾರ ಸರ್ಕಾರಿ ರಜೆ ನೀಡಲಾಗಿದೆ ಎಂಬ ನಕಲಿ ಆದೇಶ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅದರಲ್ಲಿ ಶಾಲಾ ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಲ್ಲೇಖವಾಗಿದ್ದ ಪರಿಣಾಮ ಗೊಂದಲ ಉಂಟಾಗಿತ್ತು. ಕೊನೆಗೆ ಮುಖ್ಯಮಂತ್ರಿಯವರ ಕಚೇರಿ ಜಾಲತಾಣದಲ್ಲಿ ಹರಿದಾಡುತ್ತಿರುವ ಪತ್ರ ನಕಲಿ ಎಂದು ಸ್ಪಷ್ಟಪಡಿಸಿದೆ. ಶನಿವಾರ ಎಂದಿನಂತೆ ಶಾಲಾ, ಕಾಲೇಜು ಮತ್ತು ಸರ್ಕಾರಿ ಕಚೇರಿಗಳು ಕೆಲಸ ಕಾರ್ಯ ನಿರ್ವಹಿಸಲಿವೆ ಎಂದು ಸಿಎಂ ಕಚೇರಿ ತಿಳಿಸಿದೆ. ಇದನ್ನೂ … Read more