ಶಿವಮೊಗ್ಗದ ಹೊಟೇಲ್ ನೌಕರ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
SHIVAMOGGA LIVE NEWS | 11 JUNE 2024 SHIMOGA : ಹೊಟೇಲ್ (Hotel) ಒಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮೃತನನ್ನು ರಾಕೇಶ್ (27) ಎಂದು ತಿಳಿದು ಬಂದಿದೆ. ರಾಕೇಶ್ ಮೂಲತಃ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನವನು. ಶಿವಮೊಗ್ಗದ ಹೊಟೇಲ್ ಒಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ. ರವೀಂದ್ರನಗರದಲ್ಲಿ ರಾಕೇಶ್ ವಾಸವಾಗಿದ್ದ ಕೊಠಡಿಯಲ್ಲಿ ಇವತ್ತು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಜಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. … Read more