ಶಿವಮೊಗ್ಗದಲ್ಲಿ ಒಕ್ಕಲಿಗ ಯುವ ಸಮಾವೇಶ, ಯಾರೆಲ್ಲ ಭಾಗಿಯಾಗಲಿದ್ದಾರೆ? ಏನೆಲ್ಲ ಕಾರ್ಯಕ್ರಮ ಇರುತ್ತೆ?
SHIVAMOGGA LIVE NEWS | 12 SEPTEMBER 2023 SHIMOGA : ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಸೆ.13ರಂದು ಬೆಳಿಗ್ಗೆ 10 ಗಂಟೆಗೆ ಆದಿ ಚುಂಚನಗಿರಿ ಸಮುದಾಯ ಭವನದಲ್ಲಿ ಒಕ್ಕಲಿಗರ (Vokkaliga) ಯುವ ಸಮಾವೇಶ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಕೆ. ಚೇತನ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೇತನ್, ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿದ ಸಮುದಾಯದ 125 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುತ್ತದೆ. … Read more