ವಿಷ ಸೇವಿಸಿದ್ದ ರೈತ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಕೊನೆಯುಸಿರು

crime name image

SHIVAMOGGA LIVE NEWS | 14 SEPTEMBER 2023 RIPPONPETE : ಸಾಲ ಬಾಧೆ ತಾಳಲಾರದೆ ರೈತರೊಬ್ಬರು (Farmer) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡ್ರಿಗೆ ಗ್ರಾಮದ ಕೃಷಿಕ ಕೃಷ್ಣಮೂರ್ತಿ (60) ಆತ್ಮಹತ್ಯೆ ಮಾಡಿಕೊಂಡವರು. ಸೆ. 10ರಂದು ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಭತ್ತ, ಕಬ್ಬು, ಶುಂಠಿ ಹಾಗೂ ಅಡಿಕೆ ಬೆಳೆಗಾಗಿ ಬ್ಯಾಂಕ್‌ ಮತ್ತು … Read more

ಶಿವಮೊಗ್ಗ ಸಿಟಿಯ ಅರ್ಧಕ್ಕರ್ಧ ಭಾಗದಲ್ಲಿ ಸೆ.15ರಂದು ಇಡೀ ದಿನ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE NEWS | 14 SEPTEMBER 2023 SHIMOGA : ಎಂ.ಆರ್.ಎಸ್‌ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಸೆ.15ರ ಬೆಳಗ್ಗೆ 9.30 ರಿಂದ ಸಂಜೆ 5 ಗಂಟೆವರೆಗೆ ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಎಂ.ಆರ್.ಎಸ್ ವಾಟರ್ ಸಪ್ಲೇ, ಎಂ.ಆರ್.ಎಸ್ ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಜ್ಯೋತಿನಗರ, ವಿದ್ಯಾನಗರ, ಕಂಟ್ರಿ ಕ್ಲಬ್ … Read more

ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ರೌಡಿಗಳ ಪರೇಡ್‌, ಖಡಕ್‌ ವಾರ್ನಿಂಗ್‌

Rowdy-Parade-in-Shimoga-city-and-sagara.webp

SHIVAMOGGA LIVE NEWS | 14 SEPTEMBER 2023 SHIMOGA : ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರೌಡಿ ಪರೇಡ್ (Rowdy Parade) ಮಾಡಲಾಯಿತು. ಶಿವಮೊಗ್ಗ ನಗರದಲ್ಲಿ 144 ಜನ, ಭದ್ರಾವತಿಯಲ್ಲಿ 79 ಮತ್ತು ಸಾಗರದಲ್ಲಿ 40 ರೌಡಿಗಳು ಸೇರಿ ಒಟ್ಟು 263 ಜನ ರೌಡಿಗಳು ಹಾಜರಿದ್ದರು. ಪರೇಡ್‌ನಲ್ಲಿ ಹಾಜರಿದ್ದ ರೌಡಿಗಳ ಹಾಲಿ ವಿಳಾಸ, ಆದಾಯದ ಮೂಲ ಮತ್ತು ಜೀವನೋಪಾಯಕ್ಕಾಗಿ ಮಾಡುತ್ತಿರುವ ಕೆಲಸಗಳ ಕುರಿತು ಮಾಹಿತಿ ಪಡೆಯಲಾಯಿತು. ಅಲ್ಲದೆ … Read more

ಕಾರು ಪಲ್ಟಿ, ಇಬ್ಬರು ಮಹಿಳಾ ಪ್ರಯಾಣಿಕರಿಗೆ ಗಾಯ, ಹೇಗಾಯ್ತು ಘಟನೆ?

Car-incident-near-ripponpet-and-Arasalu.webp

SHIVAMOGGA LIVE NEWS | 14 SEPTEMBER 2023 RIPPONPETE : ಚಾಲಕನ ನಿಯಂತ್ರಣ ತಪ್ಪಿ ಕಾರು (Car) ಪಲ್ಟಿಯಾಗಿದೆ. ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರಿಗೆ ಗಾಯವಾಗಿದೆ. ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆನವಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ.  ಹೊಸನಗರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ  ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿ ಹೊಸನಗರದ ಐವರು ಪ್ರಯಾಣಿಸುತಿದ್ದರು. ಇಬ್ಬರು ಮಹಿಳಾ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಉಳಿದವರು ಪಾರಾಗಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … Read more