ಖಾಸಗಿ ಶಾಲೆಯ ಅಡುಗೆ ಮನೆಯಲ್ಲಿ ಗ್ಯಾಲ್ ಲೀಕ್, ಪ್ರಾಣ ಪಣಕ್ಕಿಟ್ಟು ಕಾರ್ಯಾಚರಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

Gas-Leakage-in-Shimoga-Mandara-school

SHIVAMOGGA LIVE NEWS | 19 ಮಾರ್ಚ್ 2022 ಖಾಸಗಿ ಶಾಲೆಯೊಂದರ ವಸತಿ ನಿಲಯದ ಅಡುಗೆ ಮನೆಯಲ್ಲಿ ಗ್ಯಾಸ್ ಲೀಕ್ ಆಗಿದ್ದು ಕೆಲಕಾಲ ಆತಂಕಕ್ಕೆ ಕಾರಣವಾಗಿತ್ತು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ದೊಡ್ಡ ಅನಾಹುತ ತಪ್ಪಿಸಿದ್ದಾರೆ. ಶಿವಮೊಗ್ಗದ ಅನುಪಿನಕಟ್ಟೆಯಲ್ಲಿ ಖಾಸಗಿ ಶಾಲೆಯೊಂದರ ವಸತಿ ನಿಲಯದಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಅಡುಗೆ ಮನೆಯಲ್ಲಿ ಬಳಕೆ ಮಾಡುತ್ತಿದ್ದ ಅಡುಗೆ ಅನಿಲ ಸೋರಿಕೆ ಆಗಿದೆ. ಗ್ಯಾಸ್ ವಾಸನೆ ಎಂದು ಗೊತ್ತಾಗುತ್ತಿದ್ದ ಹಾಗೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಲಾಗಿತ್ತು. ಪ್ರಾಣ … Read more

ಮಹಿಳೆ ಮೇಲೆ ಕಾಡು ಕೋಣ ದಾಳಿ, ಗಾಯ

Thirthahalli Name Graphics

SHIVAMOGGA LIVE NEWS | 19 ಮಾರ್ಚ್ 2022 ಕಾಡು ಕೋಣ ದಾಳಿಗೆ ತುತ್ತಾಗಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಮನೆ ಸಮೀಪದಲ್ಲಿ ಘಟನೆ ಸಂಭವಿಸಿದೆ. ತೀರ್ಥಹಳ್ಳಿ ತಾಲೂಕು ದೇವಂಗಿ ಬಳಿಯ ಮಧುಗೆರೆ ಗ್ರಾಮದ ಯಶೋದಮ್ಮ ಗಾಯಗೊಂಡವರು. ಯಶೋದಮ್ಮ ಅವರು ಮನೆ ಮುಂಭಾಗದಲ್ಲಿ ಕೆಲಸ ಮಾಡುತ್ತಿದ್ದಾಗ ಕಾಡುಕೋಣ ದಾಳಿ ನಡೆಸಿದೆ. ಘಟನೆಯಲ್ಲಿ ಯಶೋದಮ್ಮ ಅವರ ಕಾಲು, ಹೊಟ್ಟೆ ಭಾಗಕ್ಕೆ ಗಾಯವಾಗಿದೆ. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಯಿತು. ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ … Read more

ಗ್ರಾಮ ಪಂಚಾಯಿತಿ ಕಚೇರಿ ಬೀಗ ಒಡೆದು ಕಳ್ಳತನ, ದಾಖಲೆಗಾಗಿ ನಡೆಯಿತಾ ಕೃತ್ಯ?

Talaguppa Graphics

SHIVAMOGGA LIVE NEWS | 19 ಮಾರ್ಚ್ 2022 ಗ್ರಾಮ ಪಂಚಾಯಿತಿ ಕಚೇರಿಯ ಬಾಗಿಲಿನ ಬೀಗಿ ಒಡೆದು ಕಳ್ಳತನ ಮಾಡಲಾಗಿದೆ. ಕಚೇರಿಯೊಳಗಿನ ಬೀರುವಿನ ಬೀಗ ಮುರಿದು ದಾಖಲೆಗಳನ್ನು ಚಲ್ಲಾಪಿಲ್ಲಿ ಮಾಡಲಾಗಿದೆ. ಸಾಗರ ತಾಲೂಕು ತಾಳಗುಪ್ಪ ಗ್ರಾಮ ಪಂಚಾಯಿತಿ ಕಚೇರಿ ಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಬೀರುವಿನ ಬೀಗ ಒಡೆದು ದಾಖಲೆಗಳನ್ನು ಚಲ್ಲಾಪಿಲ್ಲಿ ಮಾಡಲಾಗಿದೆ. ಕಳ್ಳರು ಯಾವುದೋ ದಾಖಲೆಗಾಗಿ ಬಾಗಿಲಿನ ಬೀಗ ಒಡೆದಿರುವ ಶಂಕೆ ವ್ಯಕ್ತಿವಾಗಿದೆ. ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. … Read more