ಶಿವಮೊಗ್ಗದಲ್ಲಿ ಮಾರ್ಚ್ 4ರವರೆಗೆ ನಿಷೇಧಾಜ್ಞೆ ವಿಸ್ತರಣೆ, ವ್ಯಾಪಾರಕ್ಕೆ ಹೆಚ್ಚುವರಿ ಟೈಮ್
ಶಿವಮೊಗ್ಗದ ಲೈವ್.ಕಾಂ | SHIMOGA NEWS | 27 ಫೆಬ್ರವರಿ 2022 ಶಿವಮೊಗ್ಗ ನಗರದಲ್ಲಿ ಮಾರ್ಚ್ 4ರವರೆಗೆ ನಿಷೇಧಾಜ್ಞೆ ಮುಂದುವರೆಯಲಿದೆ. ವ್ಯಾಪಾರ, ವಹಿವಾಟಿಗೆ ಅವಧಿಯನ್ನು ಮತ್ತಷ್ಟು ಹೆಚ್ಚಳ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶದಲ್ಲಿ ತಿಳಿಸಿದ್ದಾರೆ. ಮಾರ್ಚ್ 4ರವರೆಗೆ ಶಿವಮೊಗ್ಗ ನಗರದಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆವರೆಗೆ ನಿಷೇಧಾಜ್ಞೆ ಸಡಿಲಗೊಳಿಸಲಾಗಿದೆ. ಈ ಅವಧಿಯಲ್ಲಿ ವ್ಯಾಪಾರ, ವಹಿವಾಟು ಮಾಡಿಕೊಳ್ಳಬಹುದಾಗಿದೆ. ರಾತ್ರಿ 7 ಗಂಟೆ ಬಳಿ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ. … Read more