ಇನ್ಮುಂದೆ ಎಲ್ಲೆಂದರಲ್ಲಿ ಸಿಟಿ ಬಸ್ ನಿಲ್ಲಿಸುವಂತಿಲ್ಲ, ಶಿವಮೊಗ್ಗದಲ್ಲಿ 117 ಬಸ್ ಸ್ಟಾಪ್ ಗುರುತಿಸಿ ಅಧಿಸೂಚನೆ ಪ್ರಕಟ
SHIVAMOGGA LIVE NEWS |31 DECEMBER 2022 ಶಿವಮೊಗ್ಗ : ನಗರದಲ್ಲಿ ಸಂಚರಿಸುವ ಸಿಟಿ ಬಸ್ಸುಗಳು ಎಲ್ಲೆಂದರಲ್ಲಿ ನಿಲ್ಲಿಸುವುದರಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಈ ಆರೋಪದ ಹಿನ್ನೆಲೆಯಲ್ಲಿ ನಗರದಲ್ಲಿ ಬಸ್ ನಿಲ್ದಾಣಗಳನ್ನು (bus stop) ಗುರುತಿಸಿ ಅಧಿಸೂಚನೆ ಹೊರಡಿಸಲಾಗಿದೆ. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಬಸ್ ನಿಲ್ದಾಣಗಳನ್ನು (bus stop) ಗುರುತಿಸಿ ಅಧಿಸೂಚನೆ ಹೊರಡಿಸಿದ್ದಾರೆ. ನಗರದಲ್ಲಿ ಸಂಚರಿಸುತ್ತಿರುವ 61 ಸಿಟಿ ಬಸ್ಸುಗಳು ನಿಗದಿತ ನಿಲ್ದಾಣದಲ್ಲಿಯೆ ಬಸ್ ನಿಲ್ಲಿಸಬೇಕು ಎಂದು ಸೂಚಿಸಲಾಗಿದೆ. ಶಿವಮೊಗ್ಗ ನಗರದಲ್ಲಿ 117 ನಿಲ್ದಾಣಗಳನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. … Read more