ನಾಗರ ಪಂಚಮಿಯಂದೆ ಹಾವು ಕಡಿದು ಬಾಣಂತಿ ಸಾವು
SAGARA, 9 AUGUST 2024 : ಮೇವು ತರಲು ತೆರಳಿದ್ದ ವೇಳೆ ಬಾಣಂತಿಯೊಬ್ಬರಿಗೆ (Woman) ಹಾವು ಕಡಿದು ಶುಕ್ರವಾರ ಮೃತಪಟ್ಟಿದ್ದಾರೆ. ಸಾಗರ ತಾಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ಗದ್ದೆಯಲ್ಲಿ ಘಟನೆ ಸಂಭವಿಸಿದೆ. ರಂಜಿತಾ (22) ಮೃತರು. ಗದ್ದೆಯಲ್ಲಿ ಮೇವು ತರಲು ಹೋಗಿದ್ದಾಗ ಹಾವು ಕಡಿದಿದೆ. ಕುಟುಂಬದವರು ನೋಡಿದಾಗ ಬಾಣಂತಿ ರಂಜಿತಾ ಗದ್ದೆಯಲ್ಲಿ ಕುಸಿದು ಬಿದ್ದಿದ್ದರು. ತಕ್ಷಣ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ರಂಜಿತಾ ಮೃತಪಟ್ಟಿದ್ದಾರೆ. … Read more