ಅಬ್ಬಲಗೆರೆ ಸಮೀಪ ಕಾರು – ಬೈಕ್ ಡಿಕ್ಕಿ, ಕೊಮ್ಮನಾಳು ಯುವಕನಿಗೆ ಗಂಭೀರ ಗಾಯ
ಶಿವಮೊಗ್ಗ: ಕಾರು (Car) – ಬೈಕ್ ಡಿಕ್ಕಿಯಾಗಿ ಓರ್ವ ಯುವಕ ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗ – ಸವಳಂಗ ರಸ್ತೆಯಲ್ಲಿ ಅಬ್ಬಲಗೆರೆ ಸಮೀಪ ಇಂದು ಮಧ್ಯಾಹ್ನ ಅಪಘಾತ ಸಂಭವಿಸಿದೆ. ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಗ್ರಾಮದ ಚಂದನ್ (26) ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ಹಾಗೂ ಕಾರು ಭಾಗಶಃ ಜಖಂಗೊಂಡಿದೆ. ಕೂಡಲೆ ಸ್ಥಳೀಯರು ಮತ್ತು ದಾರಿಯಲ್ಲಿ ಸಾಗುತ್ತಿದ್ದವರು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದರು. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಅಧಿಕಾರಿ ಮನೆಯ ಕಾಂಪೌಂಡ್‌ನಲ್ಲಿ ಶ್ರೀಗಂಧದ … Read more