ಗುದ್ದಲಿ ಪೂಜೆಗೆ ಬಂದಿದ್ದವರನ್ನು ಬರಿಗೈಯಲ್ಲಿ ಹಿಂದಕ್ಕೆ ಕಳುಹಿಸಿದ ಗ್ರಾಮಸ್ಥರು
ಶಿವಮೊಗ್ಗ ಲೈವ್.ಕಾಂ | SHIMOGA NEWS | 26 JUNE 2021 ಸ್ಮಶಾನ ಜಾಗದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಮುಂದಾದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಅಲ್ಲದೆ ಗುದ್ದಲಿ ಪೂಜೆಗೆ ಬಂದವರನ್ನು ಬರಿಗೈಯಲ್ಲಿ ಹಿಂದಕ್ಕೆ ಕಳುಹಿಸಿದ್ದಾರೆ. ಹೊಳೆಹೊನ್ನೂರು ಸಮೀಪದ ಅಬ್ಬರಗಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿ ಎರಡು ಎಕರೆಯಲ್ಲಿ ಸ್ಮಶಾನವಿದೆ. ಇದೆ ಜಾಗದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ನಿರ್ಧರಿಸಲಾಗಿತ್ತು. ಇದರ ಗುದ್ದಲಿ ಪೂಜೆಗೆ ಸಿದ್ಧತೆ ಮಾಡಿಕೊಳಲಾಗಿತ್ತು. ರೊಚ್ಚಿಗೆದ್ದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಆಡಳಿತ … Read more