ನಟ, ನಟಿಯರಷ್ಟೇ ಅಲ್ಲ ಡ್ರಗ್ಸ್ ದಂಧೆಯಲ್ಲಿರುವ ಎಲ್ಲರ ವಿರುದ್ಧ ಕಠಿಣ ಕ್ರಮ ಅಗತ್ಯ, ಎಬಿವಿಪಿಯಿಂದ ಸಹಿ ಸಂಗ್ರಹ

110920 ABVP Signature Campaign in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020 ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ನಗರದ ಶಿವಪ್ಪನಾಯಕ ವೃತ್ತದಲ್ಲಿ ಮಾದಕ ವಸ್ತುಗಳ ವಿರುದ್ಧ ಸಹಿ ಸಂಗ್ರಹ ಅಭಿಯಾನ ಆಯೋಜಿಸಲಾಗಿತ್ತು. ಮಾದಕ ವಸ್ತುಗಳ ವಿರುದ್ಧವಾಗಿ ಮತ್ತು ಡ್ರಗ್ಸ್ ದಂಧೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿರುವ ಪ್ರಭಾವಿ ವ್ಯಕ್ತಿಗಳ ಹಾಗೂ ನಟ, ನಟಿಯರ ವಿರುದ್ಧ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಲಾಯಿತು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ … Read more

ಡ್ರಗ್ಸ್ ದಂಧೆಕೋರರ ವಿರುದ್ಧ ದೇಶ ದ್ರೋಹದ ಪ್ರಕರಣ ದಾಖಲಿಸಿ, ಸಾಗರದಲ್ಲಿ ಪ್ರತಿಭಟನೆ, ಸರ್ಕಾರಕ್ಕೆ ಒತ್ತಾಯ

100920 ABVP Protest Against Drugs in Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 10 ಸೆಪ್ಟಂಬರ್ 2020 ಡ್ರಗ್ಸ್ ಜಾಲದ ಹಿಂದಿರುವವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲು ಮಾಡಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು, ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಸೇವನೆ ಆರೋಪ ಕೇಳಿ ಬಂದಿದೆ. ಇದರ ಹಿಂದೆ ರಾಜಕಾರಣಿಗಳ ಮಕ್ಕಳು ಇರುವ ಕುರಿತು ಹೇಳಲಾಗುತ್ತಿದೆ. ಯಾರ ಪ್ರಭಾವಕ್ಕೂ ಮಣಿಯದೆ ತಪ್ಪಿತಸ್ಥರ … Read more

VISLಗೆ ಬೇಕು ಬಂಡವಾಳ, ಬೋಧಕ ಸಿಬ್ಬಂದಿ ನೇಮಕಕ್ಕೆ ಒತ್ತಾಯ, ABVP ಕಾರ್ಯಕಾರಿಣಿಯಲ್ಲಿ ಏನೆಲ್ಲ ನಿರ್ಣಯವಾಗಿದೆ ಗೊತ್ತಾ?

VISL Bhadravathi 1

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 23 ಸೆಪ್ಟೆಂಬರ್ 2019 ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಗೆ ಸರ್ಕಾರ ತಕ್ಷಣ ಬಂಡವಾಳ ಹೂಡಿಕೆ ಮಾಡಿ, ಉತ್ಪಾದನೆ ಆರಂಭಿಸಬೇಕು ಅಂತಾ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಕಾರ್ಯಕಾರಿಣಿಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಬಿವಿಪಿ ರಾಜ್ಯ ಕಾರ್ಯದರ್ಶಿ ಹರ್ಷ ನಾರಾಯಣ, ವಿಐಎಸ್ಎಲ್ ಕಾರ್ಖಾನೆ ಮುಚ್ಚುವ ಸ್ಥಿತಿಯಲ್ಲಿ ಇರುವುದು ಶೋಚನೀಯ. ಹಾಗಾಗಿ ಜನಪ್ರತಿನಿಧಿಗಳು ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಕಾರ್ಖಾನೆ ಪುನಶ್ಚೇತನದ ಕುರಿತು ಧ್ವನಿ ಎತ್ತಬೇಕು ಎಂದರು. ತೀವ್ರ ನಿಗಾ … Read more

ಶಿವಮೊಗ್ಗದಲ್ಲಿ ಎಬಿವಿಪಿಯ ಎರಡು ದಿನದ ರಾಜ್ಯ ಕಾರ್ಯಕಾರಿಣಿ, ಮಹತ್ವದ ವಿಚಾರಗಳ ಚರ್ಚೆ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 21 ಸೆಪ್ಟೆಂಬರ್ 2019 ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್’ನ ಎರಡು ದಿನದ ರಾಜ್ಯ ಕಾರ್ಯಕಾರಿಣಿ ಸಭೆ ಶಿವಮೊಗ್ಗದಲ್ಲಿ ಆರಂಭವಾಗಿದೆ. ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ನಡೆಯುತ್ತಿರುವ ಸಭೆಗೆ, ರಾಜ್ಯದ ವಿವಿಧೆಡೆಯಿಂದ ಕಾರ್ಯಕರ್ತರು ಆಗಮಿಸಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಎಬಿವಿಪಿ ರಾಜ್ಯ ಕಾರ್ಯದರ್ಶಿ ಹರ್ಷ ನಾರಾಯಣ, ದೇಶದಲ್ಲಿ ಭಾಷೆ ಮತ್ತು ಜಾತಿ ಆಧಾರದಲ್ಲಿ ಸಮಾಜವನ್ನು ಒಡೆಯುವ ಸಂಚುಗಳು ನಡೆಯುತ್ತಿವೆ. ಇದರ ವಿರುದ್ಧ ಯುವ ಸಮೂಹ ಜಾಗೃತವಾಗಿರಬೇಕು. 370ನೆ ವಿಧಿಗೆ ತಿದ್ದುಪಡಿ ತರುವ ಮೂಲಕ … Read more

ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಭದ್ರಾವತಿಯಲ್ಲಿ ಖಂಡನೆ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಮೆರವಣಿಗೆ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 06 ಜುಲೈ 2019 ಪುತ್ತೂರಿನ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿ, ಭದ್ರಾವತಿಯಲ್ಲಿ ಎಬಿವಿಪಿ ಸಂಘಟನೆ ಪ್ರತಿಭಟನೆ ನಡೆಸಿತು. ಇನ್ನು, ಈ ಘಟನೆ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಎಬಿವಿಪಿ ಸಂಘಟನೆ ಹೆಸರಿಗೆ ಕಳಂಕ ತರುವಂತೆ ಮೆಸೇಜ್ ಪ್ರಕಟಿಸುತ್ತಿರುವವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ತಹಶೀಲ್ದಾರ್ ಕಚೇರಿ ಮುಂದೆ ಇವತ್ತು ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು, ಅತ್ಯಾಚಾರ ನಡೆಸಿದ ಐವರು ಆರೋಪಿಗಳನ್ನು … Read more