ಶಿವಮೊಗ್ಗದಲ್ಲಿ ಆನೆಗಳ ನಿಯಂತ್ರಣಕ್ಕೆ ತೆಗೆದಿದ್ದ ಗುಂಡಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ, ಗ್ರಾಮಸ್ಥರು ಗರಂ
ಶಿವಮೊಗ್ಗ: ಆನೆ ನಿಯಂತ್ರಣಕ್ಕೆ ಅರಣ್ಯ ಇಲಾಖೆ ತೆಗೆದಿದ್ದ ಟ್ರಂಚ್‌ಗೆ (Trench) ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ದೇವಸ್ಥಾನದಿಂದ ಮನೆ ಬಾರದ ಹಿನ್ನೆಲೆ ಹುಡುಕಾಟ ನಡೆಸಿದಾಗ ಗುಂಡಿಯಲ್ಲಿ ಮೃತದೇಹ ಪತ್ತೆಯಾಗಿದೆ. ಶಿವಮೊಗ್ಗ ತಾಲೂಕು ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಡಿನಕೊಟ್ಟಿಗೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ನಾಗರಾಜ್ (32) ಎಂಬುವವರು ಮೃತಪಟ್ಟಿದ್ದಾರೆ. ದೇವಸ್ಥಾನದಿಂದ ಮನೆಗೆ ಬಂದಿರಲಿಲ್ಲ ಊರಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯ ವಿಸರ್ಜನೆ ಬಳಿಕ ಆಡಿಕೊಟ್ಟಿಗೆ ಗ್ರಾಮದ ದೇವಸ್ಥಾನದಲ್ಲಿ ಗ್ರಾಮಸ್ಥರು ಸಭೆ ನಡೆಸಿದರು. ಗಣೇಶೋತ್ಸವದ ಹಣಕಾಸು ವಿಚಾರವಾಗಿ ಚರ್ಚಿಸಿ ಮನೆಗೆ ತೆರಳಿದ್ದರು. ಇಂದು … Read more