SHIVAMOGGA LIVE NEWS | 5 ಏಪ್ರಿಲ್ 2022
ಆಮ್ ಆದ್ಮಿ ಪಕ್ಷ ಸೇರ್ಪಡೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಪೋಸ್ಟ್ ವಿಚಾರವಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಮೌನ ಮುರಿದಿದ್ದಾರೆ. ತಾವು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ತೀರ್ಥಹಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಎಎಪಿ ಸೇರ್ಪಡೆ ವದಂತಿ ಕುರಿತು ಆಕ್ರೋಶ ವ್ಯಕ್ತಪಡಿಸಿದರು.
ಕಿಮ್ಮನೆ ರತ್ನಾಕರ್ ಅವರು ಹೇಳಿದ್ದೇನು?
‘ಕಾಂಗ್ರೆಸ್ ಪಕ್ಷ ತೊರೆದು ಆಮ್ ಆದ್ಮಿ ಪಕ್ಷ ಸೇರ್ಪಡೆ ಆಗುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದು ಆಧಾರ ರಹಿತವಾದದ್ದು.’