ಸಹ್ಯಾದ್ರಿ ಕಾಲೇಜು ಹಾಸ್ಟೆಲ್’ನ 27 ವಿದ್ಯಾರ್ಥಿನಿಯರಿಗೆ ಹೊಟ್ಟೆನೋವು, ವಾಂತಿ, ಆಸ್ಪತ್ರೆಗೆ ದಾಖಲು
SHIVAMOGGA LIVE NEWS | 11 ಮಾರ್ಚ್ 2022 ಹೊಟ್ಟನೋವು, ವಾಂತಿಯಾದ ಹಿನ್ನೆಲೆ ಶಿವಮೊಗ್ಗ ಸಹ್ಯಾದ್ರಿ ಕಾಲೇಜು ಹಾಸ್ಟೆಲ್’ನ 27 ವಿದ್ಯಾರ್ಥಿನಿಯರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ರಾತ್ರಿ ಘಟನೆ ಸಂಭವಿಸಿದೆ. ವಿದ್ಯಾನಗರದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್’ನಲ್ಲಿರುವ 27 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ಗುರುವಾರ ಮಧ್ಯಾಹ್ನ ಊಟ ಮಾಡಿದ್ದ ವಿದ್ಯಾರ್ಥಿನಿಯರಲ್ಲಿ ಸಂಜೆ ವೇಳೆಗೆ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದೆ. ಕೂಡಲೆ ವಿದ್ಯಾರ್ಥಿನಿಯರನ್ನು ಸೈನ್ಸ್ ಮೈದಾನದ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ಮುಂದುವರೆದಿದ್ದು, ಅಪಾಯದಿಂದ ಪಾರಾಗಿದ್ದಾರೆ. … Read more