ನ.13 ರಿಂದ ಅಗ್ನಿವೀರ್ ನೇಮಕಾತಿ ರ‍್ಯಾಲಿ
ಶಿವಮೊಗ್ಗ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಅಗ್ನಿಪಥ್ ಯೋಜನೆಯಡಿ ನ.13 ರಿಂದ 19 ರವರೆಗೆ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ (Rally) ನಡೆಯಲಿದೆ. ಈ ರ‍್ಯಾಲಿಗೆ ಜೂ.30 ರಿಂದ ಜು.10 ರವೆರೆಗೆ ನಡೆದ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಭಾಗವಹಿಸಬಹುದು. ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು www.joinindianarmy.nic.in ವೆಬ್‌ಸೈಟ್‌ನಲ್ಲಿ ವಿಕ್ಷಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರಾದ ಡಾ.ಸಿ.ಎ. ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ … Read more