ಎಪಿಎಂಸಿಗಳಲ್ಲಿ ಅಡಿಕೆ ನೇರ ಖರೀದಿ ನಿಷೇಧ, ಸಹಕಾರಿ ಸಂಘಗಳಿಗೆ ಸಿಗಲಿದೆ ಉತ್ತೇಜನ

meeting-with-minister-about-AMPC-and-Adike-Market

ಶಿವಮೊಗ್ಗ : ಎಪಿಎಂಸಿಗಳಲ್ಲಿ ಅಡಿಕೆ (Adike) ನೇರ ಖರೀದಿಗೆ ಕಡಿವಾಣ ಹಾಕಲಿದ್ದು, ಖಾಸಗಿಯವರಿಗೆ ಪರವಾನಗಿ ನೀಡುವುದಿಲ್ಲ. ಕ್ಯಾಂಪ್ಕೋಸ್, ಮ್ಯಾಮ್ಕೋಸ್‌ನಂತಹ ಸಹಕಾರಿ ಸಂಘಗಳಿಗೆ ಉತ್ತೇಜನ ನೀಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಶಿವಮೊಗ್ಗ ಜಿಲ್ಲೆಯ ಅಡಿಕೆ (Adike) ಬೆಳೆಗಾರರು ಹಾಗೂ ಅಡಿಕೆ ಮಾರಾಟ ಸಹಕಾರ ಸಂಘಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಶಾಸಕರಾದ ಆರಗ ಜ್ಞಾನೇಂದ್ರ ಹಾಗೂ ಗೋಪಾಲಕೃಷ್ಣ ಬೇಳೂರು ನೇತೃತ್ವದ ಸಹಕಾರ ಸಂಘಗಳ ಮುಖಂಡರ ಜೊತೆ ನಡೆದ ಸಭೆಯಲ್ಲಿ ಮಾತನಾಡಿದರು. … Read more