ಸರ್ಕಾರಿ ನೌಕರರ ಸಂಘ ವಜಾಗೊಳಿಸುವಂತೆ ಏಕಾಂಗಿ ಪ್ರತಿಭಟನೆ

Shashi-Kumar-Gowda-Held-protest-against-govt-employees-association

SHIVAMOGGA LIVE NEWS | SHIMOGA | 22 ಜುಲೈ 2022 ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸಾರ್ವಜನಿಕರಿಗೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗಿದೆ. ಸಂಘದ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಿ ಅದನ್ನು ವಜಾಗೊಳಿಸಬೇಕು ಎಂದು ಜೆಡಿಯು (JDU) ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ಅವರು ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿ ಪ್ರತಿಭಟನೆ (PROTEST) ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಇದುವರೆಗೆ ಆಡಳಿತ ನಡೆಸಿದ ಎಲ್ಲಾ ಸರ್ಕಾರಗಳು ಸರ್ಕಾರಿ ನೌಕರರ ಹಾಗೂ ಅವರ ಕುಟುಂಬಗಳ ಹಿತವನ್ನು ಕಾಪಾಡಿಕೊಂಡು ಬಂದಿವೆ. … Read more

ಶಿವಮೊಗ್ಗ ಜಿಲ್ಲೆಯ 20 ಸರ್ಕಾರಿ ನೌಕರರಿಗೆ ಸರ್ವೋತ್ತಮ ಪ್ರಶಸ್ತಿ, ಯಾರಿಗೆಲ್ಲ ಪ್ರಶಸ್ತಿ ಘೋಷಣೆಯಾಗಿದೆ?

C-S-Shadakshari-Press-meet-in-Shimoga

SHIVAMOGGA LIVE NEWS | SHIMOGA | 18 ಏಪ್ರಿಲ್ 2022 ನಾಗರಿಕ ಸೇವಾ ದಿನವನ್ನು ಇನ್ಮುಂದೆ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಗಣರಾಜ್ಯೋತ್ಸವದ ಸಂದರ್ಭ ನೀಡುತ್ತಿದ್ದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಅದೆ ಸಂದರ್ಭ ಪ್ರದಾನ ಮಾಡಲಾಗುತ್ತದೆ. ಈ ಭಾರಿ 20 ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಎಷ್.ಷಡಾಕ್ಷರಿ ಅವರು, ಏಪ್ರಿಲ್ 21ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆ … Read more

ಸಚಿವ ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಶ್ರೀಕಾಂತ್ ಆಕ್ರೋಶ

M-Srikanth-JDS-Leader-Shrikanth.webp

SHIVAMOGGA LIVE NEWS | SHIMOGA | 13 ಏಪ್ರಿಲ್ 2022 ಕೆ.ಎಸ್. ಈಶ್ವರಪ್ಪ ಕೂಡಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್‌ ಒತ್ತಾಯಿಸಿದ್ದಾರೆ. ಸಚಿವ ಈಶ್ವರಪ್ಪ ಅವರು ಗುತ್ತಿಗೆದಾರರಿಗೆ ಶೇ. 40 ಕಮೀಷನ್ ಕೇಳಿದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿಲ್ಲ. ಆದ್ದರಿಂದ ಇವತ್ತು ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ. ಇದರ ಹೊಣೆಯನ್ನು ಸರ್ಕಾರ ಹೊತ್ತು ಮೃತರ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡಬೇಕು ಎಂದು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ. ಸಚಿವ ಈಶ್ವರಪ್ಪ ವಿರುದ್ಧ … Read more

ತೀರ್ಥಹಳ್ಳಿಯ ಮಾಳೂರು ಪೊಲೀಸ್ ಠಾಣೆ ಪಿಎಸ್ಐ ದಿಢೀರ್ ವರ್ಗಾವಣೆ

Thirthahalli Name Graphics

SHIVAMOGGA LIVE NEWS | 29 ಮಾರ್ಚ್ 2022 ತೀರ್ಥಹಳ್ಳಿ ತಾಲೂಕು ಮಾಳೂರು ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಪಿಎಸ್ಐ ಆಗಿದ್ದ ಜಯಪ್ಪ ನಾಯ್ಕ್ ಅವರನ್ನು ದಿಢೀರ್ ವರ್ಗಾಯಿಸಲಾಗಿದೆ. ಇವರಿಂದ ತೆರವಾದ ಸ್ಥಾನಕ್ಕೆ ಕುಂಸಿ ಪಿಎಸ್ಐ ನವೀನ್ ಮಠಪತಿ ಅವರನ್ನು ನಿಯೋಜಿಸಲಾಗಿದೆ. ವರ್ಗಕ್ಕೆ ಕಾರಣವಾಯ್ತಾ ಆಡಿಯೋ? ಮರಳು ಲಾರಿ ಮಾಲೀಕರು, ಚಾಲಕರು ಪಿಎಸ್ಐ ಜಯಪ್ಪ ನಾಯ್ಕ್ ಅವರ ವಿರುದ್ಧ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ದೂರು ನೀಡಿದ್ದರು. ಈಚೆಗೆ ಜಯಪ್ಪ ನಾಯ್ಕ್ ಅವರದ್ದು … Read more

ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ನೌಕರರ ಸಮನಾದ ವೇತನ, ಮೇ ತಿಂಗಳಲ್ಲಿ ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ

Government-Employees-Sports-in-Nehru-Stadium

SHIVAMOGGA LIVE NEWS | 27 ಮಾರ್ಚ್ 2022 ಸರ್ಕಾರಿ ನೌಕರರ ಸಂಘದ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಚಾಲನೆ ನೀಡಿದರು. ನೆಹರೂ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿದೆ. ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಕ್ರೀಡಾಜ್ಯೋತಿ ಸ್ವೀಕರಿಸಿದರು. ಇದೆ ಸಂದರ್ಭ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಸರ್ಕಾರಿ ನೌಕರರು ಪಥ ಸಂಚಲನ ನಡೆಸಿದರು. ‘ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ’ ಇದೆ ಸಂದರ್ಭ ಮಾತನಾಡಿದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು, ಮೇ ತಿಂಗಳಲ್ಲಿ ರಾಜ್ಯಮಟ್ಟದ ಕ್ರೀಡಾಕೂಟವನ್ನು ಶಿವಮೊಗ್ಗದಲ್ಲಿ ಆಯೋಜಿಸಲಾಗುತ್ತದೆ. … Read more

ನೆಹರೂ ಕ್ರೀಡಾಂಗಣದಲ್ಲಿ ಮಹಿಳಾ ನೌಕರರ ಹಗ್ಗ ಜಗ್ಗಾಟ

Government-Women-Employees-Sports-in-Shimoga

SHIVAMOGGA LIVE NEWS | 26 ಮಾರ್ಚ್ 2022 ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸರ್ಕಾರಿ ನೌಕರರ ಸಂಘದ ವತಿಯಿಂದ ಮಹಿಳಾ ನೌಕರರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ನೆಹರೂ ಕ್ರೀಡಾಂಗಣದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿವಿಧ ಇಲಾಖೆಗಳ ಮಹಿಳಾ ನೌಕರರು ಈ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರು. ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಅನಿತಾ ಕೃಷ್ಣ ಅವರು ಪ್ರಥಮ, ಮಂಜುಳಾ ಎಸ್ ಅವರು ದ್ವಿತೀಯ, ಗೀತಾ ಆರ್.ಬಿ ಅವರು ತೃತೀಯ ಸ್ಥಾನ ಗಳಿಸಿದರು. ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು … Read more

ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಮಂಜೂರು

VIDHANA-SOUDHA-GENERAL-IMAGE.jpg

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಅಕ್ಟೋಬರ್ 2021 ರಾಜ್ಯ ಸರ್ಕಾರಿ ನೌಕರರಿಗೆ ಬಾಕಿ ಇದ್ದ ತುಟ್ಟಿಭತ್ಯೆಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಶೇ.3ರಷ್ಟು ತುಟ್ಟಿಭತ್ಯೆ ಮಂಜೂರು ಮಾಡಿ ಆದೇಶ ಹೊರಡಿಸಿದೆ. ತುಟ್ಟಿಭತ್ಯೆ ಬಿಡುಗಡೆ ಮಾಡಿದ ಹಿನ್ನೆಲೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮುಖ್ಯಮಂತ್ರಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಸರ್ಕಾರಿ ನೌಕರರ ಸಂಘ ಮನವಿ ನೀಡಿದ 24 ಗಂಟೆ ಅವಧಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುಟ್ಟಿಭತ್ಯೆ ಮಂಜೂರು ಮಾಡಿದ್ದಾರೆ. ಕೇಂದ್ರ ಸರ್ಕಾರಕ್ಕೆ … Read more

ಶಿವಮೊಗ್ಗದಲ್ಲಿ ಖಾಸಗಿ ಬಸ್ ಪುನಾರಂಭ ವಿಳಂಬಕ್ಕೆ ಐದು ಕಾರಣ, ಏನದು?

240621 Private Busses Stopped due to corona 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 JUNE 2021 ಲಾಕ್ ಡೌನ್‍ಗೆ ರಿಲೀಫ್‍ ನೀಡಿದ ಸರ್ಕಾರ ಕೆಎಸ್‍ಆರ್‌ಟಿಸಿ ಬಸ್ ಸಂಚಾರಕ್ಕೆ ಅನುಮತಿ ನೀಡಿದೆ. ಆದರೆ ಶಿವಮೊಗ್ಗ ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳೆ ಜೀವನಾಡಿಯಾಗಿವೆ. ಹಾಗಾಗಿ ಜನರು ಖಾಸಗಿ ಬಸ್ಸುಗಳು ಯಾವಾಗ ರಸ್ತೆಗಿಳಿಯಲಿವೆ ಎಂಬ ಕಾತುರದಲ್ಲಿದ್ದಾರೆ. ಹಳ್ಳಿ ಹಳ್ಳಿಗೂ ತಲುಪುವ ಬಸ್ಸುಗಳು, ಕೃಷಿ ಚಟುವಟಿಕೆ, ರೈತರ ಆದಾಯದ ಆಧಾರವಾಗಿವೆ. ಈ ನಡುವೆ ಖಾಸಗಿ ಬಸ್ ಮಾಲೀಕರಿಗೆ ಬಸ್ಸುಗಳನ್ನು ರಸ್ತೆಗಿಳಿಸುವ ತವಕವಿದೆ. ಆದರೆ ಪ್ರಮುಖ ಸವಾಲುಗಳು ಅವರನ್ನು ಕಾಡುತ್ತಿವೆ. ಇದೆ ಕಾರಣಕ್ಕೆ ಬಸ್‍ ಶುರು ಮಾಡಲು ಹತ್ತಾರು ಭಾರಿ ಯೋಚಿಸುವಂತಾಗಿವೆ. ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ … Read more

ಬೆಳಗ್ಗೆ 6 ಗಂಟೆಗೆ ಮದ್ಯದಂಗಡಿ ಓಪನ್, ದೇವಸ್ಥಾನಗಳಿಗೆ ಯಾಕಿಲ್ಲ ಪರ್ಮಿಷನ್, ದೇವರ ದರ್ಶನದ ಅವಕಾಶಕ್ಕೆ ಆಗ್ರಹ

190621 Brahman Parishad Memorandum at Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 19 JUNE 2021 ಸಾಗರ ತಾಲೂಕಿನ ದೇವಸ್ಥಾನಗಳಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಬೇಕು ಎಂದು ವಿಪ್ರ ವೈದಿಕ ಪರಿಷತ್ ಮತ್ತು ತ್ರಿಮತಸ್ಥ ಬ್ರಾಹ್ಮಣ ಅರ್ಚಕರು, ಪುರೋಹಿತರ ಪರಿಷತ್ ವತಿಯಿಂದ ಉಪ ವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಮನವಿ ಸಲ್ಲಿಸಿದ ಪರಿಷತ್ ಸದಸ್ಯರು, 45 ದಿನದಿಂದ ದೇವಸ್ಥಾನಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಈಗ ರಾಜ್ಯದಲ್ಲಿ ಕರೋನ ಸೋಂಕು ಇಳಿಮುಖವಾಗಿದೆ. ದೇವಸ್ಥಾನ ಬಾಗಿಲು ತೆಗೆಯಲು ಅವಕಾಶ ನೀಡಬೇಕು … Read more

ಆರು ತಿಂಗಳು ರಸ್ತೆ ತೆರಿಗೆ ವಿನಾಯಿತಿ ಕೊಡಿ, ಸಾಲದ ಕಂತು ವಿಸ್ತರಿಸಿ, ಬಡ್ಡಿ ಮನ್ನಾಗೆ ಸರ್ಕಾರಕ್ಕೆ ಡಿಮಾಂಡ್

070621 Private Bus Owner Press Meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 JUNE 2021 ಕರೋನ ಲಾಕ್ ಡೌನ್‍ ಖಾಸಗಿ ಬಸ್ ಮಾಲೀಕರನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ. ಹಾಗಾಗಿ ಸರ್ಕಾರ ರಸ್ತೆ ತೆರಿಗೆ ವಿನಾಯಿತಿ ನೀಡಬೇಕು ಅಂತಾ ಮಾಲೀಕರು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಸ್ ಮಾಲೀಕರ ಸಂಘದ ಅಧ್ಯಕ್ಷ ಆರ್‍.ರಂಗಪ್ಪ, ಕಳೆದ ಲಾಕ್ ಡೌನ್ ಅವಧಿಯಲ್ಲಿ ನಮ್ಮ ಉದ್ಯಮ ಭಾರಿ ನಷ್ಟ ಅನುಭವಿಸಿತು. ಈ ಬಾರಿಯೂ ನಷ್ಟಕ್ಕೆ ಸಿಲುಕಿದೆ. ಆದ್ದರಿಂದ ಬಸ್ ಸಂಚಾರ ಆರಂಭಿಸಿದ ಆರು ತಿಂಗಳು ರಸ್ತೆ ತೆರಿಗೆ … Read more