ಆಯನೂರು | ನಡೆದು ಹೋಗುತ್ತಿದ್ದ ಯುವಕರಿಗೆ ಖಾಸಗಿ ಬಸ್ ಡಿಕ್ಕಿ

crime name image

ಶಿವಮೊಗ್ಗದ ಲೈವ್.ಕಾಂ | ಆಯನೂರು NEWS | 30 ಜನವರಿ 2022 ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು, ರಸ್ತೆ ಬದಿ ನಡೆದು ಹೋಗುತ್ತಿದ್ದ ಮೂವರು ಯುವಕರಿಗೆ ಗುದ್ದಿದೆ. ಆಯನೂರು ಬಳಿ ಶನಿವಾರ ಘಟನೆ ಸಂಭವಿಸಿದೆ. ಹಾರನಹಳ್ಳಿಯ ಅಲ್ಲಾಭಕ್ಷಿ, ರಾಹುಲ್ ಮತ್ತು ಕಿರಣ್ ಎಂಬುವವರು ಗಾಯಗೊಂಡಿದ್ದಾರೆ. ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಮೂವರು ಯುವಕರು ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಬಸ್ ಗುದ್ದುತ್ತಿದ್ದಂತೆ ಸ್ಥಳೀಯರು ಯುವಕರಿಗೆ ನೆರವಾಗಿದ್ದಾರೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು KFD ಪ್ರಕರಣ, ಶಿಕ್ಷಕರೊಬ್ಬರಿಗೆ ಸೋಂಕು ದೃಢ

Shimoga Map Graphics

ಶಿವಮೊಗ್ಗದ ಲೈವ್.ಕಾಂ | SHIMOGA NEWS | 28 ಜನವರಿ 2022 ಶಿವಮೊಗ್ಗದಲ್ಲಿ ಒಂದೇ ತಿಂಗಳಲ್ಲಿ ಎರಡನೇ KFD ಪ್ರಕರಣ ಪತ್ತೆಯಾಗಿದೆ. ಶಿಕ್ಷಕರೊಬ್ಬರಿಗೆ KFD ಸೋಂಕು (ಮಂಗನ ಕಾಯಿಲೆ) ದೃಢವಾಗಿದೆ. ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಯನೂರಿನ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜ್ವರದಿಂದ ಬಳಲುತ್ತಿದ್ದ ಶಿಕ್ಷಕ, ಶಿವಮೊಗ್ಗದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ರಕ್ತದ ಮಾದರಿಯನ್ನು KFD ಲ್ಯಾಬ್’ಗೆ ಕಳುಹಿಸಲಾಗಿತ್ತು. KFD ಪಾಸಿಟಿವ್ ಬಂದ ಹಿನ್ನೆಲೆ ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. … Read more

ಹೈವೇ ರಸ್ತೆ ಮೇಲೆ ಬಾಲಕನ ಮೃತದೇಹ ಇರಿಸಿ ಕುಂಸಿ ಗ್ರಾಮಸ್ಥರ ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

251121 villagers protest at kumsi over student death in accident

ಶಿವಮೊಗ್ಗ ಲೈವ್.ಕಾಂ | AYANUR NEWS | 26 ನವೆಂಬರ್ 2021 ಅಪಘಾತದಲ್ಲಿ ಮೃತಪಟ್ಟ ಬಾಲಕನ ಮೃತದೇಹವನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಇರಿಸಿ ಕುಂಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕಾರು ಡಿಕ್ಕಿಯಾಗಿ ಬಾಲಕ ಸಾವು ಶಾಲೆಯಿಂದ ಮನೆಗೆ ಮರಳುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿಯಾಗಿ ಮೃತಪಟ್ಟಿದ್ದಾನೆ. ವೇಣುಗೋಪಾಲ (9) ಮೃತ ಬಾಲಕ. ಸಾಗರ ಕಡೆಯಿಂದ ವೇಗವಾಗಿ ಬಂದ ಕಾರು ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ವೇಣುಗೋಪಾಲ್’ಗೆ ಡಿಕ್ಕಿ ಹೊಡೆದಿದೆ. … Read more

BREAKING NEWS | ಶಾಸಕ ಆಯನೂರು ಮಂಜುನಾಥ್ ಹೆಸರಿನಲ್ಲಿರುವ ಫೇಸ್ ಬುಕ್ ಹ್ಯಾಕ್, ಹಣಕ್ಕೆ ಡಿಮಾಂಡ್

221121 Ayanur Manjunath Facebook Hacked

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ನವೆಂಬರ್ 2021 ಶಾಸಕರೊಬ್ಬರ ಹೆಸರಿನಲ್ಲಿರುವ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಖಾತೆಯಲ್ಲಿ ಸ್ನೇಹಿತರಾಗಿರುವವರಿಗೆ ಮೆಸೇಜುಗಳನ್ನು ಕಳುಹಿಸಿ ಹಣಕ್ಕೆ ಬೇಡಿಕೆ ಇಡಲಾಗಿದೆ. ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರ ಹೆಸರಿನಲ್ಲಿರುವ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಫೇಸ್ ಬುಕ್’ನಲ್ಲಿ ಸ್ನೇಹಿತರಾಗಿರುವವರಿಗೆ ಮೆಸೇಜು ಕಳುಹಿಸಲಾಗುತ್ತಿದೆ. ಏನೆಂದು ಮೆಸೇಜ್ ಮಾಡಲಾಗುತ್ತಿದೆ? ಫೇಸ್ ಬುಕ್ ಸ್ನೇಹಿತರಿಗೆ ಮೆಸೇಜ್ ಮಾಡಿರುವ ಹ್ಯಾಕರ್’ಗಳು, ತಾವು ಸಮಸ್ಯೆಯಲ್ಲಿದ್ದು, ತುರ್ತಾಗಿ ಹಣ ಕಳುಹಿಸುವಂತೆ ಮನವಿ … Read more

ಆಯನೂರು ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದ ವರ್ತನೆ, ಮೆಡಿಕಲ್ ಟೆಸ್ಟ್ ಬಳಿಕ ಯವಕನ ವಿರುದ್ಧ ಕೇಸ್

Ayanuru General Image Board 1

ಶಿವಮೊಗ್ಗ ಲೈವ್.ಕಾಂ | AYANUR NEWS | 8 ನವೆಂಬರ್ 2021 ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದು ಮೆಡಿಕಲ್ ಟೆಸ್ಟ್’ಗೆ ಒಳಪಡಿಸಿದ್ದಾರೆ. ಆತ ಗಾಂಜಾ ಸೇವನೆ ಮಾಡಿರುವುದು ತಿಳಿಯುತ್ತಿದ್ದಂತೆ ಪ್ರಕರಣ ದಾಖಲು ಮಾಡಲಾಗಿದೆ. ಆಯನೂರು ಬಸ್ ನಿಲ್ದಾಣದ ಬಳಿ ರುದ್ರೇಶ್ ನಾಯ್ಕ ಎಂಬಾತ ಅನಮಾನಾಸ್ಪದವಾಗಿ ವರ್ತಿಸುತ್ತಿದ್ದ. ಇದನ್ನು ಗಮನಿಸಿದ ಪೊಲೀಸರು ಆತನನ್ನು ವಿಚಾರಣೆ ನಡೆಸಿದ್ದಾರೆ. ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ರುದ್ರೇಶ್ ನಾಯ್ಕನನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಮೆಡಿಕಲ್ ಪರೀಕ್ಷೆಗೆ ಒಳಪಡಿಸಿದಾಗ, ಗಾಂಜಾ ಸೇವನೆ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಅದ್ಧೂರಿಯಾಗಿ ಮೇರಾ ಆಚರಣೆ, ಹೇಗಿತ್ತು ವೈಭವ?

061121 Mera Deepavali in Banjara Community

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ನವೆಂಬರ್ 2021 ದೀಪಾವಳಿ ಹಬ್ಬದ ಅಂಗವಾಗಿ ಶಿವಮೊಗ್ಗ ಜಿಲ್ಲೆಯ ತಾಂಡಾಗಳಲ್ಲಿ ಮೇರಾ ಹಬ್ಬವನ್ನು ವೈಭವದಿಂದ ಆಚರಿಸಲಾಯಿತು. ಕರೋನ ಹಿನ್ನೆಲೆ ಕಳೆದ ವರ್ಷ ಆಚರಣೆಗೆ ಅಡ್ಡಿಯುಂಟಾಗಿತ್ತು. ಈ ಭಾರಿ ಸಾಂಪ್ರದಾಯಿಕವಾಗಿ ಮೇರಾ ಆಚರಿಣೆ ಮಾಡಲಾಯಿತು. ಆಯನೂರಿನಲ್ಲಿ ಲಂಬಾಣಿ ಸಮುದಾಯದವರ ಮೇರಾ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದರು. ಸಂಪ್ರದಾಯ, ಆಚರಣೆಗಳೆಂದರೆ ಮೂಗು ಮುರಿಯುವವರ ಮಧ್ಯೆ, ಲಂಬಾಣಿ ಸಮುದಾಯದವರು ಮೇರಾ ಅಚರಣೆಯನ್ನು ಮುಂದುವರೆಸುತ್ತಿದ್ದಾರೆ. ಇದು ಸಮುದಾಯವನ್ನು ಸಾಂಪ್ರದಾಯಿಕವಾಗಿ ಗಟ್ಟಿಗೊಳಿಸುತ್ತಿದೆ. ಮೇರಾ ಹಬ್ಬ ಅಂದರೇನು? … Read more

ಶಿವಮೊಗ್ಗ – ಆಯನೂರು ರಸ್ತೆಯಲ್ಲಿ ಭೀಕರ ಅಪಘಾತ

201021 Car Truck Accident Near Muddinakoppa

ಕಾರು, ಲಾರಿ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದ್ದು, ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ. ಕಾರು ಚಾಲಕ ನಾಗೇಂದ್ರ ಮೃತ ದುರ್ದೈವಿ. ಅವರು ಆಯನೂರು ಕಡೆಯಿಂದ ಶಿವಮೊಗ್ಗಕ್ಕೆ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಶಿವಮೊಗ್ಗದ ಕಡೆಯಿಂದ ತೆರಳುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಮುದ್ದಿನಕೊಪ್ಪ ಗ್ರಾಮದ ಬಳಿಕ ಘಟನೆ ಸಂಭವಿಸಿದೆ. ಲಾರಿ ಚಾಲಕ ಮುಂದಿದ್ದ ವಾಹನವನ್ನು ಓವರ್ ಟೇಕ್ ಮಾಡುತ್ತಿದ್ದಾಗ ಘಟನೆ ಸಂಭವಿಸಿದೆ. ಈ ವೇಳೆ ಲಾರಿ ಏಕಾಏಕಿ ಬಲಭಾಗಕ್ಕೆ ತಿರುಗಿಸಿದ್ದರಿಂದ ಕಾರಿಗೆ ಗುದ್ದಿದೆ. … Read more

ಶಿವಮೊಗ್ಗದಲ್ಲಿ ಮಾರಕಾಸ್ತ್ರಗಳಿಂದ ಪತ್ನಿಯನ್ನು ಕೊಂದ ಪತಿ

Murder-General-Image-1.jpg

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಅಕ್ಟೋಬರ್ 2021 ನಿರ್ಜನ ಪ್ರದೇಶದಲ್ಲಿ ಮಾರಕಾಸ್ತ್ರಗಳಿಂದ ಪತ್ನಿಯ ಹತ್ಯೆ ಮಾಡಿದ ಪತಿ, ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಶಿವಮೊಗ್ಗದ ಗಾಡಿಕೊಪ್ಪ ಸಮೀಪದ ವಾಸು ಸತ್ಯ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ. ಕೌಸರ್ ಫಿಜಾ ಎಂಬುವವರ ಹತ್ಯೆಯಾಗಿದೆ. ಕೊಂದು ಶರಣಾದ ಪತಿ ಆಯನೂರಿನ ಕೌಸರ್ ಫಿಜಾ, ಟಿಪ್ಪು ನಗರದ ಶೋಯಬ್ ಎಂಬಾತನೊಂದಿಗೆ ವಿವಾಹವಾಗಿದ್ದರು. ಇಬ್ಬರಿಗೆ ಒಂದು ಮಗು ಇದೆ. … Read more

ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಏಳನೆ ತರಗತಿ ವಿದ್ಯಾರ್ಥಿನಿ ಅತ್ಮಹತ್ಯೆ

Suicide-Hanging-General

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟೆಂಬರ್ 2021 ಮನೆಯಲ್ಲಿ ಯಾರೂ ಇಲ್ಲದ ವೇಳೆ ಏಳನೆ ತರಗತಿ ವಿದ್ಯಾರ್ಥಿನಿಯೊಬ್ಬಳು ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸಹನಾ (13) ಮೃತಳು. ಶಿವಮೊಗ್ಗ ತಾಲೂಕು ಹಾರನಹಳ್ಳಿಯ ಸಹನಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಮನೆಯ ಬಾಗಿಲುಗಳನ್ನು ಬಂದ್ ಮಾಡಿಕೊಂಡು ಸೀರೆಯಿಂದ ನೇಣು ಬಿಗಿದುಕೊಂಡಿದ್ದಾಳೆ. ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಹನಾ ಏಳನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. … Read more

ಆಯನೂರು ಬಳಿ ಮರಕ್ಕೆ ಹಾಲಿನ ವ್ಯಾನ್ ಡಿಕ್ಕಿ, ಕ್ಲೀನರ್​​​ಗೆ ಗಂಭೀರ ಗಾಯ

230821 Milk Truck Accident Near Ayanur

ಶಿವಮೊಗ್ಗ ಲೈವ್.ಕಾಂ | AYANUR NEWS | 23 ಆಗಸ್ಟ್ 2021 ಹಾಲು ಸರಬರಾಜು ವಾಹನ ಮರಕ್ಕೆ ಡಿಕ್ಕಿಯಾಗಿ, ಕ್ಲೀನರ್​ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಯನೂರು ಸಮೀಪದ ಚೌಡೇಶ್ವರಿ ದೇವಸ್ಥಾನದ ಬಳಿ ರಾತ್ರಿ ಘಟನೆ ಸಂಭವಿಸಿದೆ. ಸಂತೋಷ್, ಗಾಯಗೊಂಡಿರುವ ಕ್ಲೀನರ್​. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಮತ್ತು ಸಾರ್ವಜನಿಕರ ನೆರವಿನಿಂದ  ಕ್ಲೀನರ್​ನನ್ನು ರಕ್ಷಣೆ ಮಾಡಲಾಗಿದೆ. ಸಂತೋಷ್​​ನ ಎರಡು ಕಾಲುಗಳಿಗೆ ಗಂಭೀರ ಗಾಯವಾಗಿದೆ. ಕೂಡಲೆ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೇಗಾಯ್ತು ಅಪಘಾತ? ಹಾಲು ಸರಬರಾಜು ವಾಹನ ಶಿವಮೊಗ್ಗದಿಂದ ಸಾಗರದ … Read more