ಮುರ್ಡೇಶ್ವರ ಸಮುದ್ರದಲ್ಲಿ ಕೊಚ್ಚಿ ಹೋದ ಶಿವಮೊಗ್ಗದ ವ್ಯಕ್ತಿ

KARNATAKA-STATE-NEWS-UPDATE

ಭಟ್ಕಳ: ಮುರ್ಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದ ಶಿವಮೊಗ್ಗ ಜಿಲ್ಲೆಯ ಪ್ರವಾಸಿಗರೊಬ್ಬರು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಸುಭಾಷ ದೇವೆಂದ್ರಪ್ಪ (45) ಸಾವಿಗೀಡಾದವರು. ಗುರುವಾರ ಸಂಜೆ ಸ್ನೇಹಿತನೊಂದಿಗೆ ಶಿವಮೊಗ್ಗದಿಂದ ಪ್ರವಾಸಕ್ಕೆ ಬಂದಿದ್ದರು. ಶುಕ್ರವಾರ ಮಧ್ಯಾಹ್ನ ಸಮುದ್ರ ಸ್ನಾನಕ್ಕೆ ಇಳಿದಾಗ ಅಲೆಯ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ. ಮುರ್ಡೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಟ್ಯಾಂಕರ್‌ ಡಿಕ್ಕಿ, ಅರಣ್ಯ ಕಾವಲುಗಾರ ಸಾವು, ಎಲ್ಲಿ? ಹೇಗಾಯ್ತು ಘಟನೆ?