ಸಾಗರ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಬೇಳೂರಿಗೆ ಪಕ್ಷದಿಂದ ಬಿಗ್ ರಿಲೀಫ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ನವೆಂಬರ್ 2021 ಸಾಗರ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಬೇಳೂರು ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ. ಭಜರಂಗದಳ ಸಂಘಟನೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಆರೋಪದ ಹಿನ್ನೆಲೆ ಪಕ್ಷದಿಂದ ಅಮಾನತು ಮಾಡಲಾಗಿತ್ತು. ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಕ್ಷಾ ರಾಮಯ್ಯ ಅವರ ಸೂಚನೆ ಹಿನ್ನೆಲೆಯಲ್ಲಿ ಅಶೋಕ್ ಬೇಳೂರು ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಟಿ.ಎಸ್.ಪ್ರದೀಪ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಶೋಕ್ ಬೇಳೂರು ಅವರು ಸಾಗರ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ. … Read more