‘ನಾನೇನು ಸನ್ಯಾಸಿಯಲ್ಲ, ಹೈಕಮಾಂಡ್‌ ಶೀಘ್ರ ನಿರ್ಧಾರ ಕೈಗೊಳ್ಳಲಿʼ

Beluru-Gopalakrishna-speaks-to-media-in-Shimoga

ಶಿವಮೊಗ್ಗ: ನಾನೇನು ಸನ್ಯಾಸಿಯಲ್ಲ. ನನ್ನ ಹಕ್ಕು ಕೇಳುತ್ತಿದ್ದೇನೆ. ಮುಖ್ಯಮಂತ್ರಿ ಸ್ಥಾನದ ಗೊಂದಲವನ್ನು ಪರಿಹಾರ ಮಾಡುವುದರ ಜೊತೆಗೆ ಹೊಸಬರಿಗೆ ಸಚಿವ ಸ್ಥಾನ ನೀಡುವ ವಿಚಾರವನ್ನು ಹೈಕಮಾಂಡ್‌ ಶೀಘ್ರ ಬಗೆಹರಿಸಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸಚಿವ ಸ್ಥಾನ ನೀಡುವಂತೆ ರಾಜ್ಯ ಮತ್ತು ಕೇಂದ್ರ ನಾಯಕರಿಗೆ ಕೇಳಿದ್ದೇನೆ. ಪ್ರಬಲ ಆಕಾಂಕ್ಷಿ ಎಂಬುದನ್ನ ಮನದಟ್ಟು ಮಾಡಿದ್ದೇನೆ. ‘ನಾನು ಹೈಕಮಾಂಡ್‌ ಬಣʼ ಮುಖ್ಯಮಂತ್ರಿ ಬದಲಾವಣೆ ವಿಚಾರ ರಾಜ್ಯದಲ್ಲಿ ಗೊಂದಲ ಮೂಡಿಸಿದೆ. … Read more

‘ವರಿಷ್ಠರ ಭೇಟಿಗೆ ದೆಹಲಿಗೆ ತೆರಳುವೆ’, ಸಚಿವ ಸ್ಥಾನದ ಬಗ್ಗೆ ಸಾಗರ ಎಂಎಲ್‌ಎ ಏನಂದ್ರು?

Sagara-Beluru-Gopalakrishna-press-meet

ಸಾಗರ: ನಾನು ಹಿರಿಯ ಶಾಸಕ. ನನಗೆ ಸಚಿವ (Minister) ಸ್ಥಾನ ಸಿಗುವ ವಿಶ್ವಾಸ ಇದೆ. ಅಗತ್ಯ ಬಿದ್ದರೆ ವರಿಷ್ಠರ ಭೇಟಿಗೆ ಹೊಸದಿಲ್ಲಿಗೂ ತೆರಳುವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ದೃಢವಾಗಿ ಹೇಳಿದರು. ಸಾಗರದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಹಿಂದುಳಿದ ವರ್ಗಕ್ಕೆ ಸೇರಿದ ನನಗೆ ಸಚಿವ ಸ್ಥಾನ ಕೊಡಿ ಎಂದು ಹಿಂದೆ ಹೊಸದಿಲ್ಲಿಗೆ ಹೋಗಿದ್ದಾಗ ವರಿಷ್ಠರಿಗೆ ಮನವಿ ಮಾಡಿದ್ದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಬಳಿಯೂ ಕೇಳಿದ್ದೇನೆ. ನನ್ನ ಹಕ್ಕನ್ನು ಕೇಳಲು ಮುಜುಗರವಿಲ್ಲ ಎಂದರು. ಮುಖ್ಯಮಂತ್ರಿ ಬದಲಾವಣೆ, … Read more

‘ನಾನೂ ಸಚಿವ ಸ್ಥಾನದ ಅಕಾಂಕ್ಷಿ’, ಮಿನಿಸ್ಟರ್‌ ಪದವಿ ಬಗ್ಗೆ ಬೇಳೂರು ಏನೆಲ್ಲ ಹೇಳಿದರು?

Beluru-Gopalakrishna-Speaks-to-media-in-sagara

ಸಾಗರ: ನಾನು ಸಚಿವ (Minister) ಸ್ಥಾನದ ಪ್ರಬಲ ಆಕಾಂಕ್ಷಿ. ಸಂಪುಟ ವಿಸ್ತರಣೆ ಸಂದರ್ಭ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಪತ್ರಕರ್ತರ ಜೊತೆ ಮಾತನಾಡಿದ ಅವರು, ಸಚಿವ ಸ್ಥಾನ ಕೊಡಿ ಎಂದು ಎಐಸಿಸಿ ಅಧ್ಯಕ್ಷ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಎಲ್ಲರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. ಈಡಿಗ ಸಮುದಾಯದ ಪ್ರಮುಖರು ನನಗೆ ಸಚಿವ ಸ್ಥಾನ ಕೊಡಿ ಎಂದು … Read more

‘ಪಾಕಿಸ್ತಾನ ಜಿಂದಾಬಾದ್‌ ಅಂದವರನ್ನು ಗುಂಡಿಕ್ಕಿ ಕೊಲ್ಲಬೇಕು’, ಬೇಳೂರು ಗರಂ

Beluru-Gopalakrishna-distributes-chicken-at-sagara

ಸಾಗರ: ನಮ್ಮ ದೇಶದಲ್ಲಿ ಇದ್ದುಕೊಂಡು ಪಾಕಿಸ್ತಾನ ಜಿಂದಾಬಾದ್‌ (Pakistan) ಎನ್ನುವವರು ದೇಶದ್ರೋಹಿಗಳು. ಅವರು ಈ ದೇಶದಲ್ಲಿ ಇರುವಂತಿಲ್ಲ. ಅಂತಹವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದರು. ಸಾಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಪಾಕಿಸ್ತಾನ ಜಿಂದಾಬಾದ್‌ ಎಂದು ಘೋಷಣೆ ಕೂಗಿರುವುದು ಖಂಡನೀಯ. ಅಂತಹ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮವಾಗಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡುತ್ತೇನೆ ಎಂದರು. ಎಲ್ಲ ಧರ್ಮದಲ್ಲಿಯು ಕಿಡಿಗೇಡಿಗಳಿರುತ್ತಾರೆ. ಅಂತಹವರನ್ನು ಗುರುತಿಸಿ ಸಮಾಜ ಬಾಂಧವರು ದೂರ ಇರಿಸಬೇಕು. ಇಲ್ಲವಾದಲ್ಲಿ ಒಬ್ಬಿಬ್ಬರು … Read more

‘ಆಗ ಬೀದಿ ರಂಪಾಟ ಮಾಡಿದ್ದ ಬಿಜೆಪಿ ನಾಯಕರ ಬಾಯಿ ಈಗ ಒಣಗಿ ಹೋಗಿದೆಯೇ?ʼ, ಬೇಳೂರು ಗರಂ

Beluru-Gopalakrishna-Speaks-to-media-about-BJP-Leaders

ಶಿವಮೊಗ್ಗ: ರಾಜ್ಯದಲ್ಲಿ ಹಾಲು, ವಿದ್ಯುತ್‌ ದರ ಸಣ್ಣ ಮಟ್ಟಿಗೆ ಏರಿಕೆಯಾದಾಗ ಬಿಜೆಪಿ ನಾಯಕರು ಬೀದಿಗಿಳಿದು ರಂಪಾಟ ಮಾಡಿದ್ದರು. ಈಗ ಗೊಬ್ಬರ (Fertilizers) ದರ ಪ್ರತಿ ಚೀಲಕ್ಕೆ ₹180ರವರೆಗೆ ಏರಿಕೆಯಾಗಿದೆ. ಈಗ ಬಿಜೆಪಿ ನಾಯಕರ ಬಾಯಿ ಒಣಗಿ ಹೋಗಿದೆಯೆ ಎಂದು ಅರಣ್ಯ ಕೈಗಾರಿಕಾ ನಿಗಮದ ಅ‍ಧ್ಯಕ್ಷ ಮತ್ತು ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಪ್ರತಿ ಮೂಟೆ ಗೊಬ್ಬರ ₹1800ರವರೆಗೆ ತಲುಪಿದೆ. ಸಣ್ಣ ರೈತರಿಗೆ ಇದರಿಂದ ಹೊರೆಯಾಗಿದೆ. ಭತ್ತ ಬೆಳೆಯೋದೆ ಕಷ್ಟವಾಗಿದೆ. ಗೊಬ್ಬರದ … Read more

ಸಾಗರದ ಉಪ ಕಾರಗೃಹಕ್ಕೆ ಎಂಎಲ್‌ಎ ಭೇಟಿ, ಕಟ್ಟಡ ದುರಸ್ತಿ ಕಾಮಗಾರಿ ಪರಿಶೀಲನೆ

MLA-Beluru-Gopalakrishna-visits-sub-jail-in-sagara

ಸಾಗರ : ವರದಾ ರಸ್ತೆಯಲ್ಲಿರುವ ಉಪ ಕಾರಾಗೃಹ ಕಟ್ಟಡದ (Jail Building) ರಿಪೇರಿ ಕಾಮಗಾರಿ ತ್ವರಿತಗತಿಯಲ್ಲಿ ಸಾಗಿದೆ. ಶೀಘ್ರವೇ ನವೀಕೃತ ಕಟ್ಟಡದ ಉದ್ಘಾಟನೆ ನಡೆಯಲಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಉಪ ಕಾರಾಗೃಹ ಕಟ್ಟಡದ ದುರಸ್ತಿ ಕಾಮಗಾರಿಯನ್ನು ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಾಣವಾಗಿದ್ದ ಉಪ ಕಾರಾಗೃಹ ಕಟ್ಟಡ ಶಿಥಿಲಗೊಂಡಿದ್ದ ಕಾರಣ ನವೀಕೃತ ಕಟ್ಟಡ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು. ಕಟ್ಟಡದ ನವೀಕರಣಕ್ಕೆ 1.16 ಕೋಟಿ ರೂ. ಮಂಜೂರಾಗಿದೆ. ಕಾರಾಗೃಹದ ವಾರ್ಡನ್ ಹಾಗೂ … Read more

ಸಾಗರದ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೆ, ಏನೆಲ್ಲ ಸೌಲಭ್ಯ ಇರಲಿದೆ? ಮೀಟಿಂಗ್‌ನಲ್ಲಿ ಏನೆಲ್ಲ ಚರ್ಚೆಯಾಯ್ತು?

MLA-Beluru-Gopalakrishna-meeting-at-sagara

ಸಾಗರ : ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಯನ್ನು (Hospital) 100 ಹಾಸಿಗೆ ಸಾಮರ್ಥ್ಯದಿಂದ 250 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯಾಗಿ ಪರಿವರ್ತಿಸಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಸಾಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಶಾಸಕ ಬೇಳೂರು ಗೋಪಾಲಕೃಷ್ಣ ಸುದ್ದಿಗಾರರೊಂದಿಗೆ ಮಾತನಾಡಿದರು. ಎಂಎಲ್‌ಎ ಏನೆಲ್ಲ ಹೇಳಿದರು? 300 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಆಸ್ಪತ್ರೆಯ ಹಿಂಭಾಗದಲ್ಲಿರುವ ವಸತಿ ಗೃಹಗಳು … Read more

ಆನೆ ದಾಳಿ, ಸಾಗರದಲ್ಲಿ MLA ನೇತೃತ್ವದಲ್ಲಿ ಮಹತ್ವದ ಮೀಟಿಂಗ್‌, ಏನೆಲ್ಲ ಚರ್ಚೆಯಾಯ್ತು?

Beluru-Gopalakrishna-holds-meeting-with-forest-officials about elephants menace

SHIVAMOGGA LIVE NEWS, 6 JANUARY 2025 ಸಾಗರ : ಪ್ರವಾಸಿ ಮಂದಿರದಲ್ಲಿ ಅರಣ್ಯಾಧಿಕಾರಿಗಳ ಜೊತೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸಭೆ ನಡೆಸಿದರು. ಆನೆಗಳ (Elephants) ದಾಳಿ, ಬೆಳೆ ಹಾನಿ ಕುರಿತು ಚರ್ಚೆ ನಡೆಸಿದರು. ಸಮಾಲೋಚನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಬೇರೆ ಪ್ರದೇಶಗಳಿಂದ ಸಾಗರ ತಾಲೂಕಿಗೆ ಆನೆಗಳು ಲಗ್ಗೆ ಇಡುತ್ತಿವೆ. ಇವುಗಳ ನಿಯಂತ್ರಣದ ವಿಷಯವನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಲು ಸೂಚಿಸಿದ್ದೇನೆ ಎಂದರು. ತಾಲ್ಲೂಕಿನ ಗೌತಮಪುರ, ಆನಂದಪುರಂ, ಗಿಳಲಗುಂಡಿ ಹಾಗೂ ಸುತ್ತಮುತ್ತಲ … Read more

‘ನಾನೇನು ಸನ್ಯಾಸಿಯಲ್ಲ, ಮೂರು ಬಾರಿ ಶಾಸಕನಾಗಿದ್ದೇನೆʼ

Beluru-Gopalakrishna-at-Hosanagara about minister post

SHIVAMOGGA LIVE NEWS | 4 DECEMBER 2024 ಹೊಸನಗರ : ನಾನೇನು ಸನ್ಯಾಸಿ ಅಲ್ಲ. ಮೂರು ಬಾರಿ ಶಾಸಕನಾಗಿದ್ದೇನೆ. ಸಚಿವ ಸ್ಥಾನದ (Minister) ಆಕಾಂಕ್ಷಿಯಾಗಿಯೇ ಇರ್ತೇನೆ. ಅವಕಾಶ ಕೊಟ್ಟರೆ ಕೆಲಸ ಮಾಡುತ್ತೇನೆ. ಆದರೆ ಅದಕ್ಕಾಗಿ ಹೈಕಮಾಂಡ್ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಹೊಸನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ನಮ್ಮ ಮುಖಂಡರ ಜೊತೆ ಚರ್ಚೆ ಮಾಡಿದ್ದಾರೆ. ಮಾರ್ಚ್‌ವರೆಗೆ … Read more

ಜೋಗ ಜಲಪಾತದಲ್ಲಿ ರೈನ್‌ ಡಾನ್ಸ್‌, ಈಜು ಕೊಳ, ಇನ್ನು ಏನೇನಿರುತ್ತೆ?

Beluru-Gopalakrishna-in-Jog-Falls-in-Sagara

SHIVAMOGGA LIVE NEWS | 29 NOVEMBER 2024 ಸಾಗರ : ವಿಶ್ವವಿಖ್ಯಾತ ಜೋಗ ಜಲಪಾತವನ್ನು (Jog Falls) ಸರ್ವಋತು ಪ್ರವಾಸಿ ತಾಣವಾಗಿ ರೂಪಿಸಲಾಗುತ್ತದೆ. 185 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುತ್ತದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. ಜೋಗ ಜಲಪಾತ ಆವರಣದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಬೇಳೂರು ಗೋಪಾಲಕೃಷ್ಣ ಪರಿಶೀಲನೆ ನಡೆಸಿದರು. ಬಳಿಕ ಪ್ರಾಧಿಕಾರದ ಸಭೆಯಲ್ಲಿ ಭಾಗವಹಿಸಿದ್ದರು. ಎಂಎಲ್‌ಎ ಹೇಳಿದ 3 ಪ್ರಮುಖಾಂಶ ಪ್ರವಾಸಿಗರು ವರ್ಷ ಪೂರ್ತಿ ಜೋಗ ಜಲಪಾತಕ್ಕೆ ಭೇಟಿ … Read more