ತಲವಾರ್ ಹಿಡಿದು ರಾತ್ರಿ ರಸ್ತೆಯಲ್ಲಿ ಓಡಾಟ, ಅರೆಸ್ಟ್
BHADRAVATHI NEWS, 21 SEPTEMBER 2024 : ರಾತ್ರಿ ವೇಳೆ ತಲವಾರ್ ಹಿಡಿದುಕೊಂಡು ನಡು ರಸ್ತೆಯಲ್ಲಿ (Road) ಓಡಾಡುತ್ತ, ಜನರಲ್ಲಿ ಆತಂಕ ಮೂಡಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿ ಪಟ್ಟಣದ ಗಾಂಧಿ ಸರ್ಕಲ್ ಬಳಿ ಯಶವಂತ ಎಂಬಾತನನ್ನು ಬಂಧಿಸಲಾಗಿದೆ. ಈತ ತಲವಾರ್ ಹಿಡಿದು ಓಡಾಡುತ್ತಿರುವ ಕುರಿತು ಪೊಲೀಸರಿಗೆ ಮಾಹಿತಿ ಬಂದಿತ್ತು. ಕೂಡಲೆ ಸ್ಥಳಕ್ಕೆ ತೆರಳಿದ ಪಿಎಸ್‌ಐ ಚಂದ್ರಶೇಖರ್ ನೇತೃತ್ವದ ತಂಡ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಓಲ್ಡ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ … Read more