ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಭೀಕರ ಅಪಘಾತ, ಇಬ್ಬರು ಸಾವು, ಮತ್ತೊಬ್ಬನ ಸ್ಥಿತಿ ಚಿಂತಾಜನಕ
SHIMOGA NEWS, 25 OCTOBER 2024 : ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿ (Highway) ಕಳೆದ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಲಾರಿ ಮತ್ತು ಬೈಕ್ ನಡುವೆ ಅಪಘಾತವಾಗಿದೆ. ಭದ್ರಾವತಿ ಕಡೆ ತೆರಳುತ್ತಿದ್ದ ಲಾರಿ ಮತ್ತು ಎದುರಿನಿಂದ ಬರುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿಯಾದ ರಭಸಕ್ಕೆ ಬೈಕ್‌ನಲ್ಲಿದ್ದ ಮೂವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಈ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬನನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಆತನ ಸ್ಥಿತಿ … Read more