ಬೈಕ್‌ಗೆ ಡಿಕ್ಕಿ ಹೊಡೆದು ಎಳೆದೊಯ್ದ ಖಾಸಗಿ ಬಸ್, ಸವಾರನ ಸ್ಥಿತಿ ಗಂಭೀರ, ಎಲ್ಲಿ? ಹೇಗಾಯ್ತು ಘಟನೆ?
ತೀರ್ಥಹಳ್ಳಿ: ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ ಭೀಕರ ಅಪಘಾತ (Bus Rams Bike) ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿದ್ದು, ತೀರ್ಥಹಳ್ಳಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ. ತೀರ್ಥಹಳ್ಳಿಯ ಕುಶಾವತಿಯಲ್ಲಿ ಘಟನೆ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಖಾಸಗಿ ಬಸ್ಸು ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿತ್ತು. ಕುಶಾವತಿ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಬೈಕ್ ಮೇಲೆ ಹತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದನ್ನೂ … Read more