ನೂತನ ಬೈಪಾಸ್ ರಸ್ತೆ, ಹೊಸ ಸತುವೆ ಉದ್ಘಾಟಿಸಿದ ಸಂಸದ ರಾಘವೇಂದ್ರ
ಹೊಳೆಹೊನ್ನೂರು: ಚಿಕ್ಕೂಡ್ಲಿ ಬಳಿ ಭದ್ರಾ ನದಿಗೆ ನೂತನವಾಗಿ ನಿರ್ಮಿಸಿರುವ ಸೇತುವೆ ಮತ್ತು ಹೊಳೆಹೊನ್ನೂರು ರಿಂಗ್ ರಸ್ತೆಯನ್ನು (Ring Road) ಸಂಸದ ಬಿ.ವೈ.ರಾಘವೇಂದ್ರ ಲೋಕಾರ್ಪಣೆ ಮಾಡಿದರು. ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿದರು. ಬೈಪಾಸ್ ರಸ್ತೆ ನಿರ್ಮಾಣ ಹಂತದಲ್ಲಿರುವಾಗಲೇ ಅಪಘಾತಕ್ಕೀಡಾಗಿ ಮೃತಪಟ್ಟ ಪಟ್ಟಣದ ಪುಟ್ಟಪ್ಪ ಅವರ ಮನೆಗೆ ಸಂಸದ ರಾಘವೇಂದ್ರ ಭೇಟಿ ನೀಡಿದ್ದರು. ಕುಟುಂಬಕ್ಕೆ ಸಾಂತ್ವನ ಹೇಳಿದರು. 25 ಸಾವಿರ ರೂ. ನೆರವು ನೀಡಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ … Read more